Wednesday, 18th September 2019

Recent News

ಭೀಕರ ಕಾರು ಅಪಘಾತ – 2 ಮಕ್ಕಳು ಸೇರಿ, 7 ಮಂದಿ ಸಾವು

ವೇಲೂರು: ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವೇಲೂರು ಬಳಿಯ ಅಂಬುರು ಬಳಿ ನಡೆದಿದೆ.

ಕರ್ನಾಟಕ ನೋಂದಣಿ ಸಂಖ್ಯೆ ಹೊಂದಿರುವ ಸ್ವಿಫ್ಟ್ ಡಿಸೈರ್ ಕಾರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಆಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಇಬ್ಬರು ಮಕ್ಕಳು ಸೇರಿದಂತೆ, ಇಬ್ಬರು ಮಹಿಳೆಯರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿರುವ ಗೋಲ್ಡನ್ ಟೆಂಪಲ್ ಗೆ ತೆರಳಿ ವಾಪಸ್ ಬರುವಾಗ ಘಟನೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಇನ್ನು ಕಾರಿನಲ್ಲಿದ್ದವರ ವಿವರ ತಿಳಿದು ಬಂದಿಲ್ಲ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರ ಮೂಲದವರು ಎಂಬ ಮಾಹಿತಿ ಲಭಿಸಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *