ದಿಸ್ಪುರ್: ಸ್ಕಾರ್ಪಿಯೋ ಕಾರ್ (Scorpio SUV) ಹಾಗೂ ಬೊಲೆರೊ ಟ್ರಕ್ (Truck) ನಡುವೆ ನಡೆದ ಅಪಘಾತದಲ್ಲಿ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ಸೋಮವಾರ ನಡೆದಿದೆ.
ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಮಿತಿ ಮೀರಿದ ವೇಗದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ 7 ಜನ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ
ಕಾರಿನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರೆಲ್ಲ ಅಸ್ಸಾಂನ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದರು. ಅವರೆಲ್ಲರು ಹಾಸ್ಟೆಲ್‍ನಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ ಎಂದು ಅವರು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!