ಕಾರವಾರ: ಸಮುದ್ರದಲ್ಲಿ ಆಟವಾಡುತಿದ್ದ 7 ಜನ ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಮೂವರು ಕಾಣೆಯಾಗಿದ್ದು, ಮೂರು ಜನ ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಟಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
Advertisement
ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಬುಧವಾರ ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಇದನ್ನೂ ಓದಿ: ಬೆಂಗಳೂರಿಗೆ ವಿಶ್ವಮಾನ್ಯ ಗರಿಮೆ ಕೊಟ್ಟ `ಗಾರುಡಿಗ’ ಎಸ್‌ಎಂಕೆ – ವಿಶ್ವದ ಪ್ರಖ್ಯಾತ ಐಟಿ ಕಂಪನಿಗಳಿಗೆ ಸ್ಪೇಸ್
Advertisement
ಈ ಸಂದರ್ಭದಲ್ಲಿ ಲೈಫ್‌ಗಾರ್ಡಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದು ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಾವಂತಿ (15) ಸಾವು ಕಂಡ ವಿದ್ಯಾರ್ಥಿನಿಯಾಗಿದ್ದು ಮುಳಬಾಗಿಲಿನ ಯಶೋಧ, ವೀಕ್ಷಣಾ , ಲಿಪಿಕಾ ರಕ್ಷಣೆಗೊಳಗಾದವರಾಗಿದ್ದು ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಇನ್ನೂ ದೀಕ್ಷ, ಲಾವಣ್ಯ, ವಂದನಾ ಸಮುದ್ರದಲ್ಲಿ ಕಾಣೆಯಾದ ವಿದ್ಯಾರ್ಥಿನಿಯರಾಗಿದ್ದು ಹುಡುಕಾಟ ಮುಂದುವರಿದಿದೆ. ಘಟನೆ ಸಂಬಂಧ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ