ಶ್ರೀನಗರ: ವಿಶ್ವಕಪ್ ಕ್ರಿಕೆಟ್‌ನಲ್ಲಿ (World Cup Cricket) ಭಾರತ ಸೋತ ನಂತರ ಸಂಭ್ರಮಾಚರಣೆ ನಡೆಸಿದ 7 ಮಂದಿ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ (Kashmir University Students) ವಿರುದ್ಧ ಯುಎಪಿಎ (UAPA) ಅಡಿ ಕೇಸ್ ದಾಖಲಾಗಿದೆ.
ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 7 ಮಂದಿ ವಿದ್ಯಾರ್ಥಿಗಳು ಭಾರತ ಸೋತ ನಂತರ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದರು. ವಿಶ್ವವಿದ್ಯಾನಿಲಯದಲ್ಲಿ ಬಿವಿಎಸ್‌ಸಿ ಕೋರ್ಸ್ ಓದುತ್ತಿರುವ ಪಂಜಾಬ್ ನಿವಾಸಿ ಸಚಿನ್ ಬೈನ್ಸ್ ಅವರ ದೂರಿನ ಮೇರೆಗೆ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ
Advertisement
Advertisement
ಆಗಸ್ಟ್ 17ರಂದು ಭಾರತ ಸೋತ ನಂತರ ಪಾಕ್ ಪರ ಘೋಷಣೆ ಕೂಗಿದರು. ನಮ್ಮ ದೇಶದ ಬೆಂಬಲಿಗ ಎಂದು ಹೇಳಿ ನನ್ನನ್ನು ಗುರಿಯಾಗಿಸಿ ನಿಂದಿಸಲು ಪ್ರಾರಂಭಿಸಿದರು. ಪ್ರಶ್ನೆ ಮಾಡಿದ್ದಕ್ಕೆ ಸುಮ್ಮನಿರುವಂತೆ ಹೇಳಿದರು. ಸುಮ್ಮನಿರದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಬೆದರಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Advertisement
ಕಾಶ್ಮೀರ ಮೂಲದ ಏಳು ವಿದ್ಯಾರ್ಥಿಗಳ ಮೇಲೆ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ಮತ್ತು 506 ಅಡಿಯಲ್ಲಿ ಗಂಡರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement