ದಾವಣಗೆರೆ: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂಡಿಕಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿದು ಬಂದಿಲ್ಲ. ಇದನ್ನೂ ಓದಿ: ಸಮನ್ವಿ ತುಂಬಾ ಪ್ರತಿಭಾವಂತೆ, ಮಾಡೆಲ್ ಥರಾನೆ ಇದ್ದಳು: ಪುಟಾಣಿ ನೆನೆದು ತಾರಾ ಕಂಬನಿ
ಅಪಘಾತದ ತೀವ್ರತೆಗೆ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಶಾಪುರ್ ಮೂಲದ ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಬೆಳಿಗ್ಗೆ 5 ಗಂಟೆಯ ವೇಳೆಗೆ ನಿದ್ದೆಯ ಮಂಪರಿನಲ್ಲಿ ಚಾಲಕ ಡಿವೈಡರ್ಗೆ ಕಾರನ್ನು ಗುದ್ದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೀಟೂ ಕೇಸಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್