ಟ್ರಕ್‌ಗೆ ಬಸ್ ಡಿಕ್ಕಿ – 7 ಮಂದಿ ದಾರುಣ ಸಾವು

Public TV
1 Min Read
Bus Truck Accident Chhattisgarh

ರಾಯ್ಪುರ: ನಿಂತಿದ್ದ ಟ್ರಕ್‌ಗೆ(Truck) ಬಸ್(Bus) ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ(Chhattisgarh) ಕೋರ್ಬಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಇನ್ನೂ 3 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕೊರ್ಬಾದ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮದಾಯಿ ಘಾಟ್ ಬಳಿ ಮುಂಜಾನೆ 4:00 ಗಂಟೆ ವೇಳೆಗೆ ನಡೆದಿದೆ. ಬಸ್ ರಾಜ್ಯದ ರಾಜಧಾನಿ ರಾಯ್ಪುರದಿಂದ ಅಂಬಿಕಾಪುರದ ಸೀತಾಪುರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಇದನ್ನೂ ಓದಿ: ಹೆರಿಗೆ ವೇಳೆ ಮಗು ಅದಲು-ಬದಲು – DNA ಪರೀಕ್ಷೆ ನಂತ್ರ ತಾಯಿಯ ಮಡಿಲು ಸೇರಿದ ಮಕ್ಕಳು

car

ವರದಿಯ ಪ್ರಕಾರ ಬಸ್ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಾಯಾಳು ಪೌರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರ್ಬಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬ್ಯಾಂಕ್ ಖಾತೆಯಿಂದ ಹೆಂಡತಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾದ ಬ್ಯಾಂಕ್ ಸಿಬ್ಬಂದಿ

Live Tv 
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *