ಅರುಣಾಚಲ ಪ್ರದೇಶದಲ್ಲಿ ಭೂಕುಸಿತ | ಕೊಚ್ಚಿ ಹೋದ ವಾಹನ – 7 ಮಂದಿ ದುರ್ಮರಣ

Public TV
1 Min Read
Arunachal Pradesh Landslide

ಇಟಾನಗರ: ಭಾರೀ ಮಳೆಯ (Rain) ಪರಿಣಾಮ ಅರುಣಾಚಲ ಪ್ರದೇಶದ (Arunachal Pradesh) ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಭೂಕುಸಿತ (Landslide) ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.

ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಈ ವೇಳೆ, ಮಾರುತಿ ಕಾರು ಸೆಪ್ಪಾ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನ ಕೊಚ್ಚಿಹೋಗಿದೆ. ವಾಹನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಮೃತರ ಶವವನ್ನು ಹೊರಗೆ ತೆಗೆದಿದ್ದಾರೆ.

ಅರುಣಾಚಲ ಪ್ರದೇಶದ ಗೃಹ ಸಚಿವೆ ಮತ್ತು ಸ್ಥಳೀಯ ಶಾಸಕಿ ಮಾಮಾ ನಟುಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಏಳು ಅಮಾಯಕರು ಸಾವಿಗೀಡಾಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಮಳೆ ಮತ್ತು ಭೂಕುಸಿತದಿಂದಾಗಿ, ಅರುಣಾಚಲ ಪ್ರದೇಶದಾದ್ಯಂತ ಅನೇಕ ಜಿಲ್ಲೆಗಳಲ್ಲಿ ರಸ್ತೆ ಸಂಚಾರ ಕಷ್ಟವಾಗಿದೆ. ಇದರಿಂದ ಜನ ಪರದಾಡುವಂತಾಗಿದೆ.

Share This Article