ಕೊಪ್ಪಳ: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವಿಗೀಡಾಗಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.
ಮೃತ ಮಹಿಳಾ ಪೊಲೀಸ್ ಪೇದೆ ರೇಖಾ ವೀರೇಶಕುಮಾರ (33) ಮೃತ ಪೇದೆ. ಇವರು ಹುನುಗುಂದ ತಾಲೂಕಿನ ಇದ್ದಲಗಿ ಗ್ರಾಮದ ನಿವಾಸಿ.
2018ನೇ ಬ್ಯಾಚ್ನ ಮಹಿಳಾ ಪೊಲೀಸ್ ಪೇದೆಯಾಗಿರುವ ರೇಖಾ ಅವರು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗರ್ಭಿಣಿ ಪೊಲೀಸ್ ಪೇದೆಯ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.
