ಪೂಂಚ್: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪ್ರತೀಕಾರ ದಾಳಿ ನಡೆಸಿ ಪಾಕ್ 7 ಸೈನಿಕರನ್ನು ಹೊಡೆದುರುಳಿಸಿದ್ದಾರೆ.
ದೇಶಾದ್ಯಂತ ಇಂದು 70ನೇ ಸೇನಾ ದಿನ ಸಂಭ್ರಮಾಚರಣೆಯಲ್ಲಿ ತೊಡಗಿರುವ ವೇಳೆ ಪಾಕ್ ಸೈನಿಕರ ಅಪ್ರಚೋದಿತ ನಡೆಸಿದ್ದಾರೆ. ಪ್ರತಿಯಾಗಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಪಾಕ್ ನ ಏಳು ಸೈನಿಕರನ್ನು ಹೊಡೆದುರುಳಿಸಿ ತಮ್ಮ ಶೌರ್ಯವನ್ನು ತೋರಿಸಿದ್ದಾರೆ.
Advertisement
Advertisement
ಜಮ್ಮು ಕಾಶ್ಮೀರ ಪೂಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯ ಮೇಧಾರ್ ಸೆಕ್ಟರ್ ಕೋಟ್ಲಿ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಕೂಡ ಗುಂಡಿನ ದಾಳಿ ನಡೆಸಿದ ಪರಿಣಾಮವಾಗಿ ಪಾಕಿಸ್ತಾನದ ನಾಲ್ಕು ಸೇನಾ ಪೋಸ್ಟ್ ಗಳು ಧ್ವಂಸವಾಗಿದ್ದು, ಏಳು ಸೈನಿಕರು ಹತ್ಯೆಯಾಗಿರುವ ಕುರಿತು ಸೇನೆ ಮೂಲಗಳು ಮಾಹಿತಿ ನೀಡಿದೆ. ಅಲ್ಲದೇ ಈ ಕುರಿತು ಟ್ವೀಟ್ ಮಾಡಿರುವ ಪಾಕ್ ಸರ್ಕಾರ ಕನಿಷ್ಟ 4 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
Advertisement
ಅಲ್ಲದೇ ಇಂದು ಬೆಳಗ್ಗೆ ಭಾರತ ಗಡಿ ನುಸುಳಲು ಯತ್ನಿಸಿದ್ದ ಪಾಕ್ ಮೂಲದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಐವರು ಉಗ್ರರನ್ನು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಯೋಧರು ಹೊಡೆದುರುಳಿಸಿದ್ದರು.
Advertisement
ಪಾಕ್ ಆತ್ಮಾಹುತಿ ದಾಳಿ ನಡೆಸುವ ತಂಡ ಭಾರತ ಗಡಿ ಉಳಿಸಲು ಯತ್ನಿಸುತ್ತಿರುವ ಮಾಹಿತಿ ಪಡೆದ ಯೋಧರು, ಜಮ್ಮು ಕಾಶ್ಮೀರ ಪೊಲೀಸ್ ಹಾಗೂ ಪ್ಯಾರಾಮಿಲಿಟರಿ ಸೈನಿಕರೊಂದಿಗೆ ಜಂಟಿ ಕಾರ್ಯಾಚರನೆ ನಡೆಸಿ ಉಗ್ರರನ್ನು ಹೊಡೆದು ಉರುಳಿಸಿದ್ದರು. ಪ್ರಸ್ತುತ ಭಾರತೀಯ ಸೇನೆ ಐದು ಉಗ್ರರ ಮೃತ ದೇಹಗಳನ್ನು ವಶಕ್ಕೆ ಪಡೆದುಕೊಂಡಿದೆ. ಉಗ್ರರ ಬಳಿ ಆಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದು, ದೇಶದಲ್ಲಿ ಭಾರೀ ಪ್ರಮಾಣದ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂದು ಸೇನೆಯ ಮೂಲಗಳು ತಿಳಿಸಿದೆ.
ಭಾರತೀಯ ಸೇನಾ ದಿನಾಚರಣೆ ವಿಶೇಷ ಸಮಾರಂಭದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಅಲ್ಲದೆ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ದಾಳಿ ನಡೆಸುತ್ತಿದೆ. ಆದರೆ ಪಾಕಿಸ್ತಾನದ ಪ್ರಚೋದಿತ ದಾಳಿಗಳಿಗೆ ಅದೇ ರೀತಿಯಲ್ಲಿ ತಿರುಗೇಟು ನೀಡುವ ಸಾಮರ್ಥ್ಯ ಭಾರತಕ್ಕಿದೆ ಎಂಬುದನ್ನು ಆ ದೇಶ ಮರೆಯಬಾರದು ಎಂದು ಹೇಳಿದರು.