ದಾವಣಗೆರೆ: ಕಲುಷಿತ ನೀರು (Contaminated Water) ಕುಡಿದು 7 ಮಂದಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆ ಹುಣಸಘಟ್ಟ (Hunasagatta) ಪಿಡಿಒ (PDO) ಪರಮೇಶ್ ಕಳ್ಳೂರು ಅವರನ್ನು ಅಮಾನತು ಮಾಡಲಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಪಿಡಿಒ ಪರಮೇಶ್ ಅವರನ್ನು ಅಮಾನತು (Suspend) ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ
Advertisement
Advertisement
ಕುಡಿಯುವ ನೀರಿನ ಪೈಪ್‌ನಲ್ಲಿ ಚರಂಡಿ ನೀರು ಸೇರಿಕೊಳ್ಳುತ್ತಿದ್ದರೂ ಪಿಡಿಒ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ ಪಿಡಿಒ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಬಿ ಇಟ್ನಾಳ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ
Advertisement