ಜೈಪುರ: ಮನೆಯಲ್ಲಿ ತಯಾರಿಸಿದ ನೂಡಲ್ಸ್ ಸೇವಿಸಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಆಕೆಯ ಅಕ್ಕ ಅಸ್ವಸ್ಥಳಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 19ರಂದು ಈ ಘಟನೆ ನಡೆದಿದ್ದು, ಪಿಹು ಕುಮಾವತ್ ಮತ್ತು ದಿವ್ಯಾಂಶಿ ಎಂಬ ಇಬ್ಬರು ಸಹೋದರಿಯರು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾವೇ ನೂಡಲ್ಸ್ ತಯಾರಿಸಿಕೊಂಡು ಸೇವಿಸಿದ್ದಾರೆ. ಬಳಿಕ ಇಬ್ಬರೂ ನಿದ್ರೆಗೆ ಜಾರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕಲಬೆರಕೆ ಮದ್ಯ ದುರಂತ – ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಮಧ್ಯಾಹ್ನ ಸುಮಾರು 3 ಗಂಟೆಗೆ ತಾಯಿ ಮನೆಗೆ ಬಂದಾಗ, ಅಕ್ಕ ದಿವ್ಯಾಂಶಿ ಎಚ್ಚರಗೊಂಡು ಅಸ್ವಸ್ಥಳಾಗಿದ್ದಾಳೆ. ಆದರೆ, ತಂಗಿ ಪಿಹು ಮಾತ್ರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಕೂಡಲೇ ಕುಟುಂಬಸ್ಥರು ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ವೈದ್ಯರು ಪಿಹು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮತ್ತೊಂದೆಡೆ, ಅಸ್ವಸ್ಥಗೊಂಡಿದ್ದ ದಿವ್ಯಾಂಶಿಗೆ ಚಿಕಿತ್ಸೆ ನೀಡಲಾಗಿದ್ದು, ಶುಕ್ರವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ತಪ್ಪೊಪ್ಪಿಗೆ, ಅಕ್ರಮ ಸಂಬಂಧದ ಕಟ್ಟು ಕಥೆ – ಚಾರ್ಜ್ಶೀಟ್ನಲ್ಲಿ ಪಾಂಡವಪುರ ಪೊಲೀಸರ ಕಳ್ಳಾಟ ಬಯಲು
ಪ್ರಾಥಮಿಕ ತನಿಖೆಯಲ್ಲಿ ಆಹಾರ ವಿಷವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಬಾಲಕಿಯ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಈ ಸಂಬAಧ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಕರಧನಿ ಪೊಲೀಸರು ನೂಡಲ್ಸ್ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಇನ್ನು ಮೃತ ಬಾಲಕಿಯ ಸಹೋದರ ಗೋವಿಂದ್ ಅನಾರೋಗ್ಯದ ಕಾರಣ ಕಳೆದ ಎರಡು ತಿಂಗಳಿನಿAದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಟಿಂಗ್ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ನಾಯಕಿಗೆ ಬಂಧನ ಭೀತಿ
