ಅಮರಾವತಿ: ಏಳು ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದ ವೆಪಗುಂಟ ಉಪನಗರದಲ್ಲಿ ನಡೆದಿದೆ.
Andhra Pradesh: A 7-year-old girl allegedly raped by a 16-year-old boy in Vepagunta, Visakhapatnam, yesterday. Case registered under Protection of Children from Sexual Offences (POCSO) Act and other relevant sections of the Indian Penal Code (IPC). Accused has been apprehended.
— ANI (@ANI) September 7, 2019
ಪ್ರಕರಣದ ನಂತರ ಬಾಲಕಿಯ ತಂದೆ ಪೆಂಡುರ್ಥಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೋ) ಕಾಯ್ದೆ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯು ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದಾಳೆ. ಐಟಿಐ ಓದುತ್ತಿರುವ 16 ವರ್ಷದ ಬಾಲಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣದ ನಂತರ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.
ಜುಲೈನಲ್ಲಿ ಇದೇ ರೀತಿಯ ಪ್ರಕರಣ ನಡೆದು, ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬುಡಕಟ್ಟು ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕರು ಸ್ನಾನ ಮಾಡಲು ನದಿಗೆ ತೆರಳುತ್ತಿ ಬಾಲಕಿಯನ್ನು ಅತ್ಯಾಚಾರಗೈದಿದ್ದರು.