ಹಾವೇರಿ: ಪರಿಶಿಷ್ಟ ಜಾತಿ ಪ್ರಮಾಣಪತ್ರ (Caste Certificate) ಪಡೆಯಲು ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿದ ಶಿಗ್ಗಾಂವಿ (Shiggavi) ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಕೋಂ.ಮಾರುತಿ ಕಬ್ಬೇರ ಎಂಬಾಕೆಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19,000 ರೂ. ದಂಡ (Penalty) ವಿಧಿಸಿ ಹಾವೇರಿಯ (Haveri) ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀ ನಾರಾಯಣ ತೀರ್ಪು ನೀಡಿದ್ದಾರೆ.
ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಹಿಂದೂ ಗಂಗಾಮತಕ್ಕೆ (ಪ. ವರ್ಗ-01) ಸೇರಿದ್ದರೂ ಸಹ, ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಅಫಿಡವಿಟ್ ಘೋಷಣಾ ಪತ್ರ ಮತ್ತು ಇತರೆ ದಾಖಲಾತಿಗಳನ್ನು ಸೃಷ್ಟಿಸಿ ಜೂನ್ 04, 2015ರಂದು ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಿದ್ದಾರೆ. ಹಿಂದೂ ಗಂಟಿಚೋರ್ಸ್ ಪರಿಶಿಷ್ಠ ಜಾತಿಯ ಪ್ರಮಾಣಪತ್ರ ಪಡೆದು ಹನುಮರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ನಂತರ ಎಸ್‌ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾ.ಪಂ (Grama Panchayat) ಅಧ್ಯಕ್ಷೆಯಾಗಿಯೂ ಆಯ್ಕೆಯಾಗಿದ್ದರು. ಇದನ್ನೂ ಓದಿ: ಇನ್ಮುಂದೆ ನೂತನ ಇಂದಿರಾ ಕ್ಯಾಂಟೀನ್ ಊಟದ ದರ 60 ರೂ.!
ಸುಳ್ಳು ಜಾತಿಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಠ ಜಾತಿಯ ಅಭ್ಯರ್ಥಿಗೆ ಮೋಸಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್ಸ್ಪೆಕ್ಟರ್ ಟಿಜಿ ಶ್ರೀಧರ ಶಾಸ್ತ್ರಿ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ
ಲಕ್ಷ್ಮಿ ಮೇಲೆ ಕಲಂ:198, 420, 465, 468, 471 ಭಾ.ದಂ.ಸಂ. ಮತ್ತು 3(1)ಕ್ಯೂ ಎಸ್‌ಸಿ/ಎಸ್‌ಟಿ (ಪಿಎ) ತಿದ್ದುಪಡಿ ಕಾಯ್ದೆ 2015ರ ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಜಿ.ಕೂಲಗಿಮಠ ಅವರು ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ
Web Stories