DistrictsKarnatakaLatestLeading NewsMain PostUttara Kannada

ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್ ರಾಜ್ಯಕ್ಕೆ ಪ್ರಥಮ ಬಂದ 70ರ ವೃದ್ಧ

ಕಾರವಾರ: ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್ (Civil Diploma Engineering) ವಿಭಾಗದ ಪರೀಕ್ಷೆಯಲ್ಲಿ (Exam) ಶಿರಸಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ 70ರ ಹರೆಯದ ನಾರಾಯಣ ಎಸ್. ಭಟ್ಟ ರಾಜ್ಯಕ್ಕೆ (Karnataka) ಪ್ರಥಮ ಸ್ಥಾನ ಪಡೆದಿದ್ದಾರೆ.

2019-20 ರಿಂದ 2021-22ನೇ ಸಾಲಿನ ಡಿಪ್ಲೊಮಾ ಪರೀಕ್ಷೆಯ ಫಲಿತಾಂಶವನ್ನು ರಾಜ್ಯ ತಾಂತ್ರಿಕ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು ಶೇ.94 ರಷ್ಟು ಅಂಕ ಗಳಿಕೆಯೊಂದಿಗೆ ಸಿವಿಲ್ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಎಂಬ ಹಿರಿಮೆಗೆ ಇಳಿ ವಯಸ್ಸಿನ ವ್ಯಕ್ತಿ ಪಾತ್ರರಾಗಿದ್ದಾರೆ.

ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿ ಮೂಲದ ನಾರಾಯಣ ಅವರು ಸದ್ಯ ಶಿರಸಿಯಲ್ಲಿ ನೆಲೆಸಿದ್ದಾರೆ. ಇವರು 1973ರಲ್ಲೇ ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಬಳಿಕ ಕಾರವಾರ, ಗುಜರಾತ್ ಸೇರಿದಂತೆ ವಿವಿಧೆಡೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

2013ರಲ್ಲಿ ನಿವೃತ್ತಿ ಪಡೆದು ಶಿರಸಿಗೆ ಮರಳಿದ್ದ ಅವರು ಪುನಃ ಡಿಪ್ಲೊಮಾ ಕಲಿಕೆಗೆ ಆಸಕ್ತಿ ತೋರಿದ್ದರು. ಅವರಿಗೆ ಪ್ರವೇಶಾತಿ ನೀಡಲು ತಾಂತ್ರಿಕ ಅಡಚಣೆ ಎದುರಾಗಿತ್ತು. ಅಂತಿಮವಾಗಿ 2019ರಲ್ಲಿ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಡಿಪ್ಲೊಮಾ ವಿಭಾಗಕ್ಕೆ ಪ್ರವೇಶ ಪಡೆದರು.

TET EXAM 2

ತಮ್ಮ ಮೊಮ್ಮಕ್ಕಳ ವಯಸ್ಸಿನವರೊಂದಿಗೆ ಬೆರೆತು ಕಾಲೇಜಿನಲ್ಲಿ ಕುಳಿತು ಪಾಠ ಕೇಳುತಿದ್ದ ಇವರು ಪ್ರತಿ ಬಾರಿ ಕಾಲೇಜಿನ ಪರೀಕ್ಷೆಯಲ್ಲಿ ಮೊದಲಿಗರಾಗಿ ಬರುತ್ತಿದ್ದರು. ಇಳಿ ವಯಸ್ಸಿನಲ್ಲೂ ಇವರ ಬತ್ತದ ಉತ್ಸಾಹ ಮಾದರಿ ಎನಿಸಿದೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಬಿಯರ್ ಆರ್ಡರ್ ಮಾಡಲು ಹೋಗಿ 45,000 ರೂ. ಕಳ್ಕೊಂಡ

Live Tv

Leave a Reply

Your email address will not be published. Required fields are marked *

Back to top button