CrimeLatestLeading NewsMain PostNational

70 ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆಯನ್ನು ಅಪಹರಿಸಿ ಅತ್ಯಾಚಾರ

ಲಕ್ನೋ: 70 ವರ್ಷ ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ವೃದ್ಧೆಯನ್ನು ಅಪಹರಿಸಿ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಂಜೀವ್ ಬಾಜ್‌ಪೇಯ್ ತಿಳಿಸಿದ್ದಾರೆ. ಇದನ್ನೂ ಓದಿ: ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

STOP RAPE

ವೃದ್ಧೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ರಕ್ತಸ್ರಾವದಿಂದ ಬಳಲುತ್ತಿದ್ದ ಬುದ್ಧಿಮಾಂದ್ಯ ವೃದ್ಧೆಯನ್ನು ಆಕೆಯ ಕುಟುಂಬಸ್ಥರು ಜಮೀನೊಂದರಲ್ಲಿ ಪತ್ತೆಹಚ್ಚಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರು ಆರೋಪಿಯ ಬಟ್ಟೆಯ ಮೇಲೆ ರಕ್ತದ ಕಲೆಗಳನ್ನು ಗುರುತಿಸಿದ್ದಾರೆ. ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಗಾಳಿ ತುಂಬುವಾಗ ಬುಲ್ಡೋಜರ್ ಟೈರ್ ಬ್ಲಾಸ್ಟ್ – ಮೇಲಕ್ಕೆ ಹಾರಿದ ಇಬ್ಬರು ಸಾವು

ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published.

Back to top button