ಬೆಂಗಳೂರು: ಮನೆಯವರಿಗೆ ತೊಂದರೆ ಕೊಡುವುದು ಬೇಡವೆಂದು ವೃದ್ಧೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪರ್ವತಿನಗದಲ್ಲಿ ನಡೆದಿದೆ.
ಜಯಮ್ಮ(70) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಜಯಮ್ಮ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ 3 ದಿನಗಳಿಂದ ಕಾಯಿಲೆ ಹೆಚ್ಚಾಗಿದ್ದ ಕಾರಣ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಯಮ್ಮ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೇ ಮನೆಯವರಿಗೆ ತೊಂದರೆ ಕೊಡುವುದು ಬೇಡವೆಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ವಿಷಯ ತಿಳಿಯುತ್ತಿದ್ದಂತೆ ಅತ್ತಿಬೆಲೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನೀಡಿದ್ದಾರೆ.
ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews