ಯಾದಗಿರಿ: ಜಿಲ್ಲೆಯ ಶಹಾಪುರದಲ್ಲಿನ ಪಡಿತರ ಅಕ್ಕಿ ಕಳ್ಳತನ (Ration Theft) ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಸಹೋದರನ ರೈಸ್ ಮಿಲ್‍ನಿಂದ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
Advertisement
ಗುರುಮಠಕಲ್ ನಲ್ಲಿರುವ ಲಕ್ಷ್ಮೀವೆಂಕಟೇಶ್ವರ ರೈಸ್ ಮಿಲ್ ನಿಂದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದು ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್‍ಗೆ (Raju Rathod) ಸೇರಿದ್ದಾಗಿದೆ. ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ 70 ಕ್ವಿಂಟಾಲ್ ಅಕ್ಕಿ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದರು ಎನ್ನಲಾಗಿದೆ.
Advertisement
Advertisement
ಸದ್ಯ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳು ರಾಜು ರಾಠೋಡ್ ಗೆ ಅಕ್ಕಿ ಮಾರಾಟ ಮಾಡಿರೋದಾಗಿ ಹೇಳಿಕೆ ನೀಡಿದ್ದಾರೆ. ಕಳೆದ 15 ದಿನಗಳಿಂದ ರಾಜು ರಾಠೋಡ್ ತಲೆ ಮರಿಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅಸ್ಥಿಪಂಜರ ಪತ್ತೆ ಕೇಸ್: ಮಾನಸಿಕ ಅಸ್ವಸ್ಥತೆಯಿಂದ ಆತ್ಮಹತ್ಯೆಗೆ ಶರಣಾಗಿತ್ತಾ ಇಡೀ ಕುಟುಂಬ? – ಪೊಲೀಸರ ತನಿಖೆ ಚುರುಕು