– ಕಳೆದ ಸಚಿವ ಸಂಪುಟದಲ್ಲಿ ಸಿಎಂ ಶಿವಕುಮಾರ್ ಅವರಿಂದ ಸಮ್ಮತಿ
– ಮಂಡ್ಯ ಜಿಲ್ಲೆಗೆ ನೂರು ಹೊಸ ಬಸ್‌ಗಳ ಮಂಜೂರು
ಮಂಡ್ಯ: ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ (Transport Department) 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.
ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡರಾದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ನೇತೃತ್ವದಲ್ಲಿ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಬೆಳ್ಳೂರು ಹೋಬಳಿಯ ಕನ್ನಾಘಟ್ಟ ಗ್ರಾಮದಲ್ಲಿ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ ಮತ್ತು ನೂತನ ದೇವಾಲಯದ ಲೋಕಾರ್ಪಣ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಿದ್ರೆ ಈ ಬೆಸ್ಕಾಂ ಸೂಚನೆಗಳನ್ನು ಪಾಲಿಸಿ
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಾರಿಗೆ ಇಲಾಖೆಯ ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಗೆ ಒಟ್ಟು 7 ಸಾವಿರ ಕೋಟಿ ರೂಪಾಯಿ ಅನುದಾನವನ್ನು ನೀಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಇದಿಷ್ಟೇ ಅಲ್ಲದೇ, 1 ಸಾವಿರ ಬಸ್ ಗಳನ್ನು ಖರೀದಿ ಮಾಡಲು ಹಸಿರು ನಿಶಾನೆ ತೋರಿದ್ದು, ರಾಜ್ಯದ ಬಸ್ ನಿಲ್ದಾಣಗಳ ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದಿಂದ 2 ಸಾವಿರ ಕೋಟಿ ರೂಪಾಯಿ ಪಡೆಯಲೂ ಸಮ್ಮತಿ ಸೂಚಿಸಿರುವುದು ಸಂತಸದ ವಿಚಾರವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಕಲಿ ಔಷಧ ಮಾಫಿಯಾ ವಿರುದ್ಧ ಕಠಿಣ ಕ್ರಮ: ಯು.ಟಿ. ಖಾದರ್
ಗ್ಯಾರಂಟಿಗೆ 76 ಸಾವಿರ ಕೋಟಿ ರೂ.:
ಸಿದ್ದರಾಮಯ್ಯ ಅವರು 2023ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ತಕ್ಷಣ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾದರು ಮತ್ತು ಅದರ ಶ್ರೇಯಸ್ಸು ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ. ಈಗಿನ ಮುಖ್ಯಮಂತ್ರಿ ಶಿವಕುಮಾರ್ ಅವರು ಯೋಜನೆಗಳನ್ನು ಮುಂದುವರಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡುವ ಮತ್ತೊಂದು ಯೋಜನೆಯನ್ನು ಪ್ರಕಟಿಸಿ ಜನಮಾನಸದಲ್ಲಿ ಉಳಿಯುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಚತುರ್ಥಿಯಂದು ಕೆಲವರು ಬಾಲಗಣಪತಿಯನ್ನ ಪ್ರತಿಷ್ಠಾಪನೆ ಮಾಡೋದೇಕೆ?
ರಾಜ್ಯದಲ್ಲಿ ಸುಮಾರು 50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಇದಕ್ಕಾಗಿ ಸಾರಿಗೆ ಸಂಸ್ಥೆಗಳಿಗೆ ವಾರ್ಷಿಕ ಸುಮಾರು 350 ಕೋಟಿ ರೂ. ವೆಚ್ಚವಾಗುತ್ತದೆ. ಇದು ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗುತ್ತದೆ ಎಂಬುದನ್ನು ಮನಗಂಡಿರುವ ಮುಖ್ಯಮಂತ್ರಿಗಳು ಈ ಹಣವನ್ನು ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: 2029ರೊಳಗೆ ಎನ್‌ಡಿಎ ಆಡಳಿತದ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ: ಅಮಿತ್ ಶಾ
ಉಚಿತ ಬಸ್ ಪ್ರಯಾಣದ ಶಕ್ತಿ, 10 ಕೆಜಿ ಉಚಿತ ಅಕ್ಕಿ, 2 ಸಾವಿರ ರೂಪಾಯಿ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ 3 ಸಾವಿರ ರೂಪಾಯಿಗಳನ್ನು ನೀಡುತ್ತಿದ್ದೇವೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 76 ಸಾವಿರ ಕೋಟಿ ರೂಪಾಯಿಗಳನ್ನು ನೀಡುತ್ತಿದೆ. ಹೀಗೆ ಕಳೆದ 3 ವರ್ಷದಿಂದ 1.68 ಲಕ್ಷ ಕೋಟಿ ರೂಪಾಯಿಗಳನ್ನು ನಮ್ಮ ರಾಜ್ಯದ ಜನರಿಗೆ ಉಚಿತವಾಗಿ ನೀಡಿದೆ ಎಂದರು. ಇದನ್ನೂ ಓದಿ: ಅಶೋಕ್, ವಿಜಯೇಂದ್ರರನ್ನು ಸರಿಸಿ ಅಧಿಕಾರಕ್ಕೆ ಬರೋ ಆಸೆ ಕುಮಾರಸ್ವಾಮಿದು: ಡಿಕೆಶಿ ವ್ಯಂಗ್ಯ
ಮಂಡ್ಯ ಜಿಲ್ಲೆಗೆ ನೂರು ಬಸ್:
ಮಂಡ್ಯ ಜಿಲ್ಲೆಗೆ ಹೊಸದಾಗಿ 40 ಬಸ್‌ಗಳನ್ನು ಮಂಜೂರು ಮಾಡುವಂತೆ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಮನವಿ ಸಲ್ಲಿಸಿದ್ದಾರೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಈ ಜಿಲ್ಲೆಗೆ 100 ಬಸ್ ಗಳನ್ನು ನೀಡಲಿದೆ. ಮುಂದಿನ 15-20 ದಿನಗಳೊಳಗಾಗಿ ಈ ಬಸ್‌ಗಳ ಸಂಚಾರವನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಟಿ.ನರಸೀಪುರದಲ್ಲಿ ಹೈಡ್ರಾಮಾ| ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ
2028ಕ್ಕೂ ನಾವೇ ಬರ್ತೀವಿ:
2028ಕ್ಕೂ ನಮ್ಮ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು 2033ಕ್ಕೆ ನೋಡೋಣ. 2028ಕ್ಕಂತೂ ನಮ್ಮದೇ ಸರ್ಕಾರ ಬರಲಿದೆ. ಆಗ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್‌ಗೆ ಶಾಕ್ – ಜಿಎಫ್‌ಪಿ ಜೊತೆ ಆಪ್ ಮೈತ್ರಿ
ಶ್ರೀಮಠದಿಂದ ಸಮಪಾಲು ಸಮಬಾಳು:
ಆದಿ ಚುಂಚನಗಿರಿ ಪುಣ್ಯಕ್ಷೇತ್ರವು ಕೇವಲ ಒಕ್ಕಲಿಗ ಸಮುದಾಯದ ಹಿತವನ್ನಷ್ಟೇ ಕಾಯುತ್ತಿಲ್ಲ. ಪ್ರತಿಯೊಂದು ಸಮುದಾಯದವರನ್ನೂ ಒಂದೇ ರೀತಿಯಲ್ಲಿ ಪರಿಗಣಿಸುತ್ತಿದೆ. ಇದರ ಪರಿಣಾಮವಾಗಿ ಪ್ರತಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಶ್ರೀಮಠದಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಈ ಮೂಲಕ ಶ್ರೀಮಠವು ಕುವೆಂಪುರವರು ಸಾರಿದ ಸಮಪಾಲು, ಸಮಬಾಳು, ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶವನ್ನು ಮಠದಲ್ಲಿ ಚಾಚೂ ತಪ್ಪದೇ ಪಾಲಿಸುತ್ತಿದೆ ಎಂದು ಬೈರತಿ ಸುರೇಶ್ ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಭೂಮಿ ಸಮಸ್ಯೆ ಬಗೆಹರಿಸಿಕೊಡಿ: ಪ್ರಧಾನಿ ಮೋದಿಗೆ ಬಾಲ್ಯದ ಗೆಳೆಯ ಮನವಿ
ಸ್ಟಾರ್ ಚಂದ್ರು ಮತ್ತು ಪುಟ್ಟಸ್ವಾಮಿಗೌಡರು ತಮ್ಮ ಊರಷ್ಟೇ ಅಲ್ಲದೇ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗಿ ಸಾಕಷ್ಟು ಸಮಾಜಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಜೀವನದಲ್ಲಿ ಇಂತಹ ಪುಣ್ಯವಾದ ಕೆಲಸಗಳನ್ನು ಮಾಡುವ ಅವಕಾಶಗಳು ಕಡಿಮೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಇದನ್ನೂ ಓದಿ: ಟಿ ನರಸೀಪುರ ಇನ್ಸ್‌ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಠಾಣೆಯ ಮುಂದೆ ಬಿಜೆಪಿ ಪ್ರತಿಭಟನೆ

