700ರ ಗಡಿದಾಟಿದ ಕೊರೊನಾ – ಓಮಿಕ್ರಾನ್ 43ಕ್ಕೆ ಏರಿಕೆ

Advertisements

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ನಿನ್ನೆ 566 ಹೊಸ ಪ್ರಕರಣ ಪತ್ತೆಯಾಗಿತ್ತು. ಇಂದು ಒಟ್ಟು 707 ಕೇಸ್ ಮತ್ತು 3 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆ ಕಂಡು ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 565 ಮಂದಿಗೆ ಇಂದು ಕೊರೊನಾ ಬಂದಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಮೂರು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 252 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,223ಕ್ಕೆ ಏರಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,06,505 ಮಂದಿಗೆ ಕೊರೊನಾ ಬಂದಿದೆ. 39,59,926 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.42 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.61 ರಷ್ಟಿದೆ. ಇದನ್ನೂ ಓದಿ: ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

Advertisements

ರಾಜ್ಯದಲ್ಲಿ ಇಂದು ಒಟ್ಟು 1,63,161 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,686 ಸ್ಯಾಂಪಲ್ (ಆರ್​ಟಿಪಿಸಿಆರ್ 92,405 + 22,281 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

Advertisements

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 565, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 8, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 3, ಕೊಡಗು 12, ಕೋಲಾರ 5, ಕೊಪ್ಪಳ 0, ಮಂಡ್ಯ 8, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 6, ಉಡುಪಿ 19, ಉತ್ತರ ಕನ್ನಡ 6, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Advertisements
Exit mobile version