– ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್‌ಗೆ ಕರೆ
ಮುಂಬೈ: ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮಹಾರಾಷ್ಟ್ರದ ಬದ್ಲಾಪುರದಲ್ಲಿ ಉದ್ನಿಗ್ನ (Badlapur Violence) ಪ್ರತಿಸ್ಥಿತಿ ನಿರ್ಮಿಸಿದೆ. ಸಾರ್ವಜನಿಕರ ಪ್ರತಿಭಟನೆ ಬುಧವಾರ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಇದೇ ವೇಳೆ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ 72 ಪ್ರತಿಭಟನಾಕಾರರನ್ನ (Protester) ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ನಡೆದಿದ್ದ ಪ್ರತಿಭಟನೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳಲ್ಲಿ ಕನಿಷ್ಠ 17 ನಗರ ಪೊಲೀಸ್ (Maharashtra Police) ಸಿಬ್ಬಂದಿ ಮತ್ತು ಸುಮಾರು 8 ರೈಲ್ವೆ ಪೊಲೀಸರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಪರಿಸ್ಥಿತಿ ಸಹಜಸ್ಥಿತಿಗೆ ಮರಳಿದೆ. ಇನ್ನೂ ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಮಹಾರಾಷ್ಟ್ರ ಬಂದ್‌ಗೆ ಕರೆ:
ಈ ಹೀನ ಕೃತ್ಯ ಖಂಡಿಸಿ ಮತ್ತು ಮಹಿಳಾ ಸುರಕ್ಷತೆಗಾಗಿ ಮಹಾ ವಿಕಾಸ್ ಅಗಾಡಿ ಆ.24ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದೆ. ಅಗಾಡಿಯ ಮಹಾಸಭೆಯಲ್ಲಿ, ಕಾಂಗ್ರೆಸ್, ಶಿವಸೇನೆ (UBT) ಮತ್ತು NCP ಮೂರು ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಬದ್ಲಾಪುರ ಘಟನೆ ಮತ್ತು ರಾಜ್ಯದ ಒಟ್ಟಾರೆ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಚರ್ಚಿಸಿದರು.
Advertisement
ಏನಿದು ಹೀನ ಕೃತ್ಯ?
ಮಹಾರಾಷ್ಟ್ರದ ಥಾಣೆಯಲ್ಲಿ ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿತ್ತು. ಆಗಸ್ಟ್ 12-13ರಂದು ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಅಂದು ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಘಟನೆ ಖಂಡಿಸಿ ಸಾರ್ವಜನಿಕರು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.
Advertisement
ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆ ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.