ಢಾಕಾ: ಬಾಂಗ್ಲಾದೇಶದ (Bangladesh Clash) ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದ್ದು, ಇದಕ್ಕೆ ಆಡಳಿತಾರೂಢ ಅವಾಮಿ ಲೀಗ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಸಂಘರ್ಷ ಭುಗಿಲೆದ್ದಿದ್ದು, 72 ಮಂದಿ ಸಾವಿಗೀಡಾಗಿದ್ದಾರೆ.
ಬಾಂಗ್ಲಾ ಸಂಘರ್ಷದಿಂದಾಗಿ ದೇಶದಲ್ಲಿರುವ ಭಾರತೀಯರು ಆತಂಕಗೊಂಡಿದ್ದಾರೆ. ಬಾಂಗ್ಲಾದಲ್ಲಿರುವ ತನ್ನ ನಾಗರಿಕರಿಗೆ ಸಂಪರ್ಕದಲ್ಲಿ ಇರುವಂತೆ ಭಾರತೀಯ ರಾಯಭಾರಿ ಕಚೇರಿ ಸೂಚನೆ ನೀಡಿದೆ. ಇದನ್ನೂ ಓದಿ: ಜನನ ದರ ಹೆಚ್ಚಿಸಲು ಪ್ಲ್ಯಾನ್; ಮದ್ವೆ ಆಗೋದು, ಮದ್ವೆ ಮಾಡ್ಸೋದನ್ನ ಕಾಲೇಜಿನಲ್ಲೇ ಹೇಳಿಕೊಡ್ತಾರಂತೆ!
ಭಾರತದ ಸಹಾಯಕ ಹೈ ಕಮಿಷನ್, ಸಿಲ್ಹೆಟ್‌ನ ಅಧಿಕಾರ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ. ಜೊತೆಗೆ ಜಾಗರೂಕರಾಗಿರಲು ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ +88-01313076402 ಅನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಸರ್ಕಾರಿ ಉದ್ಯೋಗ ಕೋಟಾ ಕುರಿತಾದ ಪ್ರತಿಭಟನೆಗಳು ಮತ್ತೆ ಪುನರಾರಂಭಗೊಂಡಿವೆ. ಮೃತರಲ್ಲಿ ಹದಿನಾಲ್ಕು ಮಂದಿ ಪೊಲೀಸರು ಸೇರಿದ್ದಾರೆ. ಇದನ್ನೂ ಓದಿ: ಇಸ್ರೇಲ್ v/s ಹಿಜ್ಬುಲ್ಲಾ; ಇಬ್ಬರ ನಡುವೆ ಕಿತ್ತಾಟ ಯಾಕೆ? – ಭಾರತೀಯರಿಗೆ ಎಚ್ಚರಿಕೆ!
ಕೆಲವೇ ದಿನಗಳ ಹಿಂದೆ, 1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತವನ್ನು ಮೀಸಲಿಡುವ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
ಸರ್ಕಾರದ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್, ಛತ್ರ ಲೀಗ್, ಜುಬೋ ಲೀಗ್ ಕಾರ್ಯಕರ್ತರ ನಡುವೆ ಮತ್ತೆ ಘರ್ಷಣೆಯಾಗಿದೆ.