ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ ಕಂಡಿದ್ದು, ಒಟ್ಟು 720 ಹೊಸ ಪ್ರಕರಣಗಳು ದಾಖಲಾಗಿದೆ. ಕೋವಿಡ್ಗೆ ರಾಜ್ಯದಲ್ಲಿ ಇಂದು ಇಬ್ಬರ ಸಾವಾಗಿದೆ.
Advertisement
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 10,508 ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಇಂದು 273 ಪ್ರಕರಣ ದಾಖಲಾಗಿದೆ. ಈವರೆಗೆ ಒಟ್ಟು 40,168 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 662 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ.2.67ಕ್ಕೆ ತಲುಪಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಹುಡುಗರನ್ನು ಹೊರಗೆ ಹಾಕಬೇಕು: ಸೋನು ಶ್ರೀನಿವಾಸ್ ಗೌಡ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 40,40,831 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,90,113 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 4,513 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 26,883 ಸ್ಯಾಂಪಲ್ (ಆರ್ಟಿ ಪಿಸಿಆರ್ 20,289 + 6,594 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: RSS ಭಾರತವನ್ನ ಮಾದರಿ ಸಮಾಜವಾಗಿ ರೂಪಿಸಲು ಶ್ರಮಿಸುತ್ತಿದೆ: ಮೋಹನ್ ಭಾಗವತ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 12, ಬಳ್ಳಾರಿ 31, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 273, ಬೀದರ್ 0, ಚಾಮರಾಜನಗರ 8, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 30, ಚಿತ್ರದುರ್ಗ 2, ದಕ್ಷಿಣ ಕನ್ನಡ 12, ದಾವಣಗೆರೆ 7, ಧಾರವಾಡ 25, ಗದಗ 2, ಹಾಸನ 63, ಹಾವೇರಿ 12, ಕಲಬುರಗಿ 9, ಕೊಡಗು 29, ಕೋಲಾರ 17, ಕೊಪ್ಪಳ 6, ಮಂಡ್ಯ 14, ಮೈಸೂರು 43, ರಾಯಚೂರು 19, ರಾಮನಗರ 2, ಶಿವಮೊಗ್ಗ 15, ತುಮಕೂರು 14, ಉಡುಪಿ 10, ಉತ್ತರ ಕನ್ನಡ 20, ವಿಜಯಪುರ 3 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]