ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಘಟಪ್ರಭಾ ನದಿಗೆ 28,791ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಕಮಲದಿನ್ನಿ ಗ್ರಾಮದ ಬಳಿಯಿರುವ ಸೇತುವೆ ಮುಳುಗಡೆ ಆಗಿದೆ.
Advertisement
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿರುವ ಮತ್ತೊಂದು ಸೇತುವೆ ಮುಳುಗಡೆ ಆಗಿದೆ. ನಿರಂತರ ಮಳೆಗೆ ಘಟಪ್ರಭಾ ನದಿಗೆ 28,791 ಕ್ಯೂಸೆಕ್ ನೀರಿನ ಒಳಹರಿವು ಪ್ರಮಾಣ ಹೆಚ್ಚಳವಾಗಿದೆ. ಆದರೆ ಮುಳುಗಡೆಯಾದ ಸೇತುವೆ ಮೇಲೆ ಜನರು ಸಂಚಾರ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಅಪಾಯವನ್ನು ಲೆಕ್ಕಿಸದೇ ಸೇತುವೆ ಬಳಿ ಬೈಕ್‍ಗಳನ್ನು ತೊಳೆಯುತ್ತಿದ್ದರೆ, ಪೋಷಕರು ಪುಟ್ಟಪುಟ್ಟ ಮಕ್ಕಳನ್ನು ಸೇತುವೆ ಬಳಿ ಕರೆತಂದಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ
Advertisement
Advertisement
ಈಗಾಗಲೇ ಮೂಡಲಗಿ ತಾಲೂಕಿನಲ್ಲಿ ನಾಲ್ಕು ಕೆಳಹಂತದ ಸೇತುವೆ ಮುಳುಗಡೆ ಆಗಿದ್ದು, ಅವರಾದಿ – ಮೂಡಲಗಿ, ಅವರಾದಿ – ಮಹಾಲಿಂಗಪುರ, ಸುಣಧೋಳಿ – ಮೂಡಲಗಿ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮುಳುಗಡೆಯಾದ ಸೇತುವೆ ಮೇಲೆ ಜನಸಂಚಾರ ನಿಷೇಧಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಬೆಳಗಾವಿಯ 13 ಸೇತುವೆಗಳು ಜಲಾವೃತ – ಮತ್ತೆ ಪ್ರವಾಹ ಭೀತಿ