ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಳಿತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು ಒಟ್ಟು 673 ಕೊರೊನಾ ಪ್ರಕರಣ ವರದಿಯಾಗಿದೆ.
Advertisement
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 6,718ಕ್ಕೆ ತಲುಪಿದೆ. ಬೆಂಗಳೂರು ನಗರದಲ್ಲಿ ಇಂದು 621 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 6,256ಕ್ಕೆ ತಲುಪಿದೆ. ಇಂದು ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಗದಗದಲ್ಲಿ ವರದಿಯಾಗಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ ದಾಖಲಾದ 10 ಪ್ರಕರಣ ಜಿಲ್ಲೆಗಳ ಪೈಕಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.98ಕ್ಕೆ ತಲುಪಿದೆ. ಈವರೆಗೆ ಒಟ್ಟು 40,082 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ಜಯಕರ ಎಸ್.ಎಂ ನೇಮಕ
Advertisement
Advertisement
ಇಂದು 852 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,79,694 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,32,852 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 34,046 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 13,504 ಸ್ಯಾಂಪಲ್ (ಆರ್ಟಿಪಿಸಿಆರ್ 9,849 + 3,655 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿ ಮನೆ ಕೆಲಸಕ್ಕೆ ಸೇರಿ ಕಳ್ಳತನ ಮಾಡ್ತಿದ್ದ ಬಾಂಬೆ ಲೇಡಿಸ್ ಗ್ಯಾಂಗ್ ಅರೆಸ್ಟ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಳ್ಳಾರಿ 4, ಬೆಳಗಾವಿ 4, ಬೆಂಗಳೂರು ನಗರ 621, ಚಾಮರಾಜನಗರ 1, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 4, ಗದಗ 1, ಹಾಸನ 1, ಹಾವೇರಿ 1, ಕಲಬುರಗಿ 3, ಕೊಡಗು 2, ಕೋಲಾರ 1, ಮೈಸೂರು 10, ರಾಯಚೂರು 2, ರಾಮನಗರ 6, ಶಿವಮೊಗ್ಗ 2, ತುಮಕೂರು 2, ಉಡುಪಿ 1, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಪ್ಪಳ, ಮಂಡ್ಯ, ಉತ್ತರ ಕನ್ನಡ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]