ಬೀದರ್: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ (National Lok Adalat) ಒಟ್ಟು 73,628 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಬೀದರ್ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಮಾಹಿತಿ ನೀಡಿದರು.ಇದನ್ನೂ ಓದಿ:ಗೋಕರ್ಣ ಸಮುದ್ರದಲ್ಲಿ ಮುಳುಗಿ ಅಪಾಯಕ್ಕೆ ಸಿಲುಕಿದ್ದ ವಿದೇಶಿಗನ ರಕ್ಷಣೆ
ಜಿಲ್ಲೆಯಲ್ಲಿ ಇಂದು (ಡಿ.18) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಹಾಗೂ ಒಟ್ಟು 23,43,28,647 ರೂ.ಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು.
ಸದರಿ ಲೋಕ್ ಅದಾಲತ್‌ನಲ್ಲಿ 10,191 ಬಾಕಿಯಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, 13,16,69,342 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 63,437 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, 10,26,59,305 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಅದೇ ರೀತಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ, 3 ಜೋಡಿ ದಂಪತಿಯನ್ನು ರಾಜೀ ಸಂಧಾನದ ಮೂಲಕ ಒಂದು ಮಾಡಲಾಗಿದೆ ಎಂದರು.ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ತೆರಳುವ ಮುನ್ನ ಶಿವಣ್ಣ ಭಾವುಕ