ನವದೆಹಲಿ: ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇ.75ರಷ್ಟು ವಯಸ್ಕರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಲಸಿಕಾ ಅಭಿಯಾನಕ್ಕೆ ಸಹಕರಿಸಿದ ದೇಶದ ನಾಯಕರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.
Advertisement
ದೇಶದ ಶೇ.75 ವಯಸ್ಕರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಈ ಮಹತ್ವದ ಸಾಧನೆಗಾಗಿ ನಮ್ಮ ನಾಗಕರಿಕರಿಗೆ ಅಭಿನಂದನೆಗಳು. ನಮ್ಮ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸುತ್ತಿರುವ ಎಲ್ಲರ ಬಗ್ಗೆಯೂ ಹೆಮ್ಮೆಯಿದೆ ಎಂದು ಮೋದಿ ಅವರು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ತಪಾಸಣೆ ನೆಪದಲ್ಲಿ ಮಹಿಳಾ ರೋಗಿಗೆ ಕಿರುಕುಳ – ವೈದ್ಯನ ವಿರುದ್ಧ ದೂರು
Advertisement
75% of all adults are fully vaccinated.
Congratulations to our fellow citizens for this momentous feat.
Proud of all those who are making our vaccination drive a success. https://t.co/OeCJddtAL8
— Narendra Modi (@narendramodi) January 30, 2022
Advertisement
ಕೇಂದ್ರ ಸರ್ಕಾರದ ಸಾಧನೆ ಕುರಿತು ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಆಶಯದೊಂದಿಗೆ ಭಾರತದ ವಯಸ್ಕ ಜನತೆಗೆ ಕೋವಿಡ್ ಲಸಿಕೆಯ ಎರಡೂ ಡೋಸ್ ನೀಡಿಕೆಯು ಶೇ.75ರಷ್ಟು ಆಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ನಾವು ಬಲಶಾಲಿಗಳಾಗುತ್ತಿದ್ದೇವೆ. ನಾವು ಎಲ್ಲಾ ನಿಯಮಗಳನ್ನು ಅನುಸರಿಸಬೇಕು. ಆದಷ್ಟು ಬೇಗ ದೇಶದ ಪ್ರತಿಯೊಬ್ಬರೂ ಕೋವಿಡ್ ಲಸಿಕೆಯನ್ನು ಪಡೆಯಬೇಕು ಎಂದು ಕರೆ ನೀಡಿದ್ದಾರೆ.
Advertisement
12.43 ಕೋಟಿಗಿಂತ ಹೆಚ್ಚು ಕೋವಿಡ್ ಲಸಿಕೆಗಳು ಬಳಕೆಯಾಗದೇ ವಿವಿಧ ರಾಜ್ಯಗಳಲ್ಲಿ ಹಾಗೇ ಉಳಿದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ
ಭಾನುವಾರ ದೇಶದಲ್ಲಿ ಕೋವಿಡ್‌ನ 2,34,281 ಹೊಸ ಪ್ರಕರಣಗಳು ದೃಢಪಟ್ಟಿವೆ. ಸದ್ಯ 18,84,937 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 1,65,70,60,692 ಡೋಸ್ ಲಸಿಕೆ ನೀಡಲಾಗಿದೆ.