ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾ ಜನವರಿ 13 ರಂದು ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ 75 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಮಾರಾಟವಾಗಿವೆ. ಬಿಡುಗಡೆಯ ಹೊತ್ತಿಗೆ ಈ ಸಂಖ್ಯೆ ಒಂದು ಲಕ್ಷ ದಾಟಬಹುದು ಎಂದು ನಿರ್ದೇಶಕ ಬಿ.ಎಸ್.ಲಿಂಗದೇವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳಿಗೆ ಇಂತಹ ಬೆಂಬಲ ಸಿಕ್ಕಿದ್ದು ನಿಜಕ್ಕೂ ಅಚ್ಚರಿ ತಂದಿದೆ ಎನ್ನುವುದು ಅವರ ಮಾತು.
Advertisement
ಮೊನ್ನೆಯಷ್ಟೇ ಈ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಯಿತು. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದರು. ಅವರ ಸಮ್ಮುಖದಲ್ಲಿ ರಿಲೀಸ್ ಆಗಿರುವ ಟ್ರೈಲರ್ ಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಂಥದ್ದೊಂದು ಸಿನಿಮಾ ಈ ಹೊತ್ತಿಗೆ ತುರ್ತಾಗಿ ಬೇಕಿತ್ತು ಎನ್ನುವ ಮಾತುಗಳನ್ನು ಅನೇಕರು ಆಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?
Advertisement
Advertisement
ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ್ದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದಿದ್ದರು.
Advertisement
ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿ ವಿನೂತನವಾಗಿ ರಥೆಯಾತ್ರೆ ಆರಂಭಿಸಿತ್ತು ಚಿತ್ರತಂಡ. 20-12-22 ರಂದು 6 ರಥಗಳು ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k