ಲಕ್ನೋ: ಉತ್ತರ ಪ್ರದೇಶದ (Uttar Pradesh) ಕುಚ್‌ಮುಚ್ ಗ್ರಾಮದಲ್ಲಿ 75ರ ವೃದ್ಧನೊಬ್ಬ 35 ವರ್ಷದ ಮಹಿಳೆಯನ್ನು ಮದುವೆಯಾಗಿ, ಮಾರನೆ ದಿನವೇ ಮೃತಪಟ್ಟಿರುವ ಘಟನೆ ನಡೆದಿದೆ.
ಜೌನ್‌ಪುರ ಜಿಲ್ಲೆಯ ಕುಚ್‌ಮುಚ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿ ವರ್ಷದ ಹಿಂದಷ್ಟೇ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡಿದ್ದ. ಅಂದಿನಿಂದ ಒಂಟಿಯಾಗಿದ್ದ. ವೃದ್ಧನಿಗೆ ಮಕ್ಕಳಿರಲಿಲ್ಲ. ಜೊತೆಗೆ ಯಾರಾದರು ಇರಬೇಕೆಂಬ ಆಶಯದೊಂದಿಗೆ ತನಿಗಿಂತ ಅರ್ಧ ವಯಸ್ಸಿನ ಕಿರಿಯವಳನ್ನು ವಿವಾಹವಾಗಿದ್ದ. ಆದರೆ, ಮದುವೆಯಾದ ಮಾರನೇ ದಿನವೇ ವೃದ್ಧಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಮೊದಲ ಪತ್ನಿ ತೀರಿಕೊಂಡ ಮೇಲೆ ಮತ್ತೊಂದು ಮದುವೆಯಾಗುವಂತೆ ಕುಟುಂಬಸ್ಥರು ಸಲಹೆ ನೀಡಿದ್ದರು. ಅದರಂತೆ ಜಲಾಲ್ಪುರ ಪ್ರದೇಶದ ನಿವಾಸಿ 35 ವರ್ಷದ ಮನ್ಭವತಿ ಅವರನ್ನು ವಿವಾಹವಾದರು. ಸ್ಥಳೀಯ ದೇವಾಲಯದಲ್ಲಿ ಸಾಂಪ್ರದಾಯಿಕವಾಗಿ ಜೋಡಿ ಮದುವೆಯಾದರು.
ಮದುವೆ ಬಳಿಕ ಮನ್ಭವತಿ, ನನ್ನ ಪತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಮನೆಯ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಮದುವೆಯ ಮೊದಲ ರಾತ್ರಿ ಇಬ್ಬರೂ ಒಟ್ಟಿಗೆ ಸಮಯ ಕಳೆದಿದ್ದರು. ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಆದರೆ, ಬೆಳಗ್ಗೆ ಹೊತ್ತಿಗೆ ಸಂಗ್ರರಾಮ್ ಅವರ ಆರೋಗ್ಯ ಹದಗೆಟ್ಟಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ವೃದ್ಧ ಮೃತಪಟ್ಟಿದ್ದರು. ಈ ಹಠಾತ್ ಸಾವು ಗ್ರಾಮದಲ್ಲಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ದೆಹಲಿಯಲ್ಲಿ ವಾಸಿಸುವ ಸೋದರಳಿಯರು ಸೇರಿದಂತೆ ಮೃತರ ಸಂಬಂಧಿಕರು, ತಾವು ಬರುವವರೆಗೂ ಅಂತ್ಯಕ್ರಿಯೆ ವಿಧಿಗಳನ್ನು ನಡೆಸದಂತೆ ಸೂಚಿಸಿದ್ದಾರೆ.