ಶ್ರೀನಗರ: ಸ್ವಾತಂತ್ರ್ಯದ 75 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರದ ಗ್ರಾಮ ಸದ್ದಲ್‍ಗೆ ಕೇಂದ್ರ ಸರ್ಕಾರದ ‘ಅನ್ಟೈಡ್ ಗ್ರ್ಯಾಂಟ್ಸ್ ಸ್ಕೀಮ್’ ಅಡಿಯಲ್ಲಿ ಬುಧವಾರ ಮೊದಲ ಬಾರಿಗೆ ವಿದ್ಯುತ್ ಪಡೆಯುವ ಮೂಲಕ ಕತ್ತಲೆಯಿಂದ ಮುಕ್ತಿ ದೊರೆತಿದೆ.
ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವುದರಿಂದ ಈ ಗ್ರಾಮದ ನಿವಾಸಿಗಳು ತಮ್ಮ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯಕ್ಕಾಗಿ ಆಶಾಭಾವನೆ ಮೂಡಿಸಿದ್ದಾರೆ. ಮೊದಲು, ಹಳ್ಳಿಯಲ್ಲಿ ಸಂಜೆಯ ಸಮಯದಲ್ಲಿ ಬೆಳಕಿನ ಏಕೈಕ ಮೂಲವೆಂದರೆ ಮೇಣದಬತ್ತಿಗಳು ಮತ್ತು ಎಣ್ಣೆ ದೀಪಗಳು, ಅದು ಕ್ರಮೇಣ ಅವರ ದೈನಂದಿನ ಜೀವನದ ಭಾಗವಾಯಿತು. ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್
ಈ ಕಾರ್ಯಾಚರಣೆಯ ಯಶಸ್ಸಿಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಗ್ರಾಮಸ್ಥರು ಮನ್ನಣೆ ನೀಡಿದ್ದಾರೆ. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ, ಉಧಮ್‍ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಮಕ್ಕಳು ಕೃತಜ್ಞರಾಗಿದ್ದಾರೆ. ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ
8 ನೇ ತರಗತಿ ವಿದ್ಯಾರ್ಥಿನಿ ಪ್ಯಾರ್ ಸಿಂಗ್ ಅನ್ನುವವರು ಮಾತನಾಡಿ, ಈಗ ನಾವು ಯಾವುದೇ ತೊಂದರೆಯಿಲ್ಲದೆ ಆರಾಮವಾಗಿ ಓದುತ್ತೇವೆ. ಈ ಹಿಂದೆ ವಿದ್ಯುತ್ ಇಲ್ಲದ ಕಾರಣ ಎಣ್ಣೆ ದೀಪ ಹಚ್ಚಿಕೊಂಡು ಓದಬೇಕಾಗಿತ್ತು. ಇದರಿಂದ ನಮಗೆ ಹೆಚ್ಚು ಬೇಸರ ತರಿಸುತ್ತಿತು ಎಂದರು. 72 ವರ್ಷದ ತಾತ ಬದರಿನಾಥ್ ಅವರು, ಮಾತನಾಡಿ, ಹಿಂದಿನ ಪೀಳಿಗೆಯವರಂತು ವಿದ್ಯುತ್ ಪವಾಡವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಲಿಲ್ಲ. ಇಷ್ಟು ಸುದೀರ್ಘ ಕಾಯುವಿಕೆಯ ನಂತರ ನಮಗೆ ವಿದ್ಯುತ್ ಒದಗಿಸಿದ ಇಲಾಖೆಗೆ ಇಂದು ನಾವು ಕೃತಜ್ಞರಾಗಿರುತ್ತೇವೆ ಎಂದು ಖುಷಿಪಟ್ಟರು.
ಎಕ್ಸಿಕ್ಯೂಟಿವ್ ಇಂಜಿನಿಯರ್ (ಎಕ್ಸ್‌ಇಎನ್), ಪವರ್ ಡೆವಲಪ್‍ಮೆಂಟ್ ಡಿಪಾರ್ಟ್‍ಮೆಂಟ್ (ಪಿಡಿಡಿ) ಉಧಮ್‍ಪುರ್ ಜಾವೇದ್ ಹುಸೇನ್ ಅಖ್ತರ್ ಮಾತನಾಡಿ, ಗ್ರಾಮ ಸದ್ದಲ್ ಭಾರತ ಸರ್ಕಾರದ ನಿರ್ದೇಶನಗಳೊಂದಿಗೆ ಸಂಪೂರ್ಣವಾಗಿ ವಿದ್ಯುದ್ದೀಕರಿಸಲ್ಪಟ್ಟಿದೆ. ಇದಕ್ಕೆ 10.28 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ತಿಳಿಸಿದರು.
ಸರ್ಕಾರ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, 25 ಕೆವಿಎ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿದ ನಂತರ ಗ್ರಾಮದ ಸುಮಾರು 25 ಮನೆಗಳು ಪ್ರಯೋಜನ ಪಡೆದಿವೆ. ಇದು ಜಿಲ್ಲೆಯ ವಿದ್ಯುತ್ ವಲಯದಿಂದ ಐತಿಹಾಸಿಕ ಸಾಧನೆಯಾಗಿದೆ. ಉಧಂಪುರದ ಪಂಚರಿ ತಹಸಿಲ್‍ನಲ್ಲಿರುವ ಪಂಚಾಯತ್ ಹಲ್ಕಾ ಕುಲ್ತ್ಯಾರ್ ಬಾಳದ ವಾರ್ಡ್ ಸಂಖ್ಯೆ 5ರ ಅಡಿಯಲ್ಲಿ ಈ ಗ್ರಾಮವು ಬರುತ್ತದೆ.