ನವದೆಹಲಿ : ದೆಹಲಿ ಕರ್ನಾಟಕ ಸಂಘ (Delhi Karnataka Sangha) 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಫೆ. 25, 26ರಂದು ಅಮೃತ್ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ. 25ರಂದು ಪ್ರಧಾನಿ ಮೋದಿ (Narendra Modi) ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ತಿಳಿಸಿದರು.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಲಿದೆ. 10-12 ಸಾವಿರ ಕನ್ನಡಿಗರು ಎರಡು ದಿನಗಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಘಕ್ಕೆ ದುಡಿದ ಮಹನೀಯರನ್ನು ಗೌರವಿಸುವ ಕೆಲಸ ಮಾಡಲಿದ್ದೇವೆ. 75 ಗಣ್ಯರಿಗೆ ವಿಶೇಷ ಸನ್ಮಾನ ಇರಲಿದೆ. 1,200 ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದರು.
Advertisement
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ನಂಜಾವಧೂತ ಶ್ರೀಗಳು ಹಾಗು ಮೈಸೂರು ಮಹಾರಾಜ ಯದುವೀರ ಒಡೆಯರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಜಯ್ ಪ್ರಕಾಶ್ ಅವರ ತಂಡದಿಂದ ಸಂಗೀತೋತ್ಸವ ಹಾಗೂ ಕಾಮಿಡಿ ಕಿಲಾಡಿಗಳಿಂದ ಹಾಸ್ಯಸಂಜೆ ಆಯೋಜಿಸಲಾಗಿದೆ ಎಂದು ವಿವರಿಸಿದರು.
Advertisement
ಆಕ್ಷೇಪ : ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಂಘದ ಮೂಲ ಆಶಯದಿಂದ ಬಹಳ ದೂರ ಸರಿದಿದ್ದು, ಈ ಹಿನ್ನೆಲೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸಂಘದ ಮಾಜಿ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ಡಾ. ವೆಂಕಟಾಚಲ ಹೆಗಡೆ ಹಾಗೂ ವಸಂತ ಶೆಟ್ಟಿ ಬೆಳ್ಳಾರೆ ತಿಳಿಸಿದ್ದಾರೆ. ಇದನ್ನೂ ಓದಿ: ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್
Advertisement
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ. ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ ಲೇಖಕರು, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ, ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ನಾಯಕರಿಗೆ ಆದ್ಯತೆ ನೀಡಲಾಗಿದೆ. ಇದು ದೆಹಲಿ ಕರ್ನಾಟಕ ಸಂಘವನ್ನು ವಶಪಡಿಸಿಕೊಳ್ಳಲು ಬಿಜೆಪಿ ಮಾಡುತ್ತಿರುವ ಮತ್ತೊಂದು ಪ್ರಯತ್ನ ಎಂದು ಪುರುಷೋತ್ತಮ ಬಿಳಿಮಲೆ ಆರೋಪಿಸಿದ್ದಾರೆ. ಇದನ್ನೂ ಓದಿ: ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ: ರೂಪಾ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Thanks for sharing. I read many of your blog posts, cool, your blog is very good. https://www.binance.com/es/register?ref=53551167
Your point of view caught my eye and was very interesting. Thanks. I have a question for you. https://accounts.binance.com/fr/register-person?ref=V2H9AFPY