ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್ಗಳು ದಾಖಲಾಗಿದೆ.
Advertisement
ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 34 ಕೇಸ್ ಮತ್ತು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 425 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,825ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,60,208 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,15,271 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 57,152 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,469 ಸ್ಯಾಂಪಲ್ (ಆರ್ಟಿಪಿಸಿಆರ್ 18,146 + 6,323 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ದೇಶಭಕ್ತಿ ಇರೋರು ಸೇನೆ ಸೇರ್ತಾರೆ ಇಲ್ಲದಿರೋರು ಸಿದ್ದರಾಮಯ್ಯ ಥರ ಮಾತನಾಡುತ್ತಾರೆ: ಸಿ.ಟಿ ರವಿ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 716, ಮೈಸೂರು 8, ದಕ್ಷಿಣಕನ್ನಡ 7, ಉಡುಪಿ 6, ಶಿವಮೊಗ್ಗ 5, ಧಾರವಾಡ 4, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ತಲಾ ಎರಡೆರಡು ಪ್ರಕರಣ ಸೇರಿ ಒಟ್ಟು 750 ಕೇಸ್ ವರದಿಯಾಗಿದೆ.