ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ (Republic Day 2026) ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಮಾಣೆಕ್ ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ
ಗಣರಾಜ್ಯೋತ್ಸವ ಹಿನ್ನೆಲೆ ಮಾಣೆಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಸೇರಿದಂತೆ, ನಗರದಾದ್ಯಂತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಪರೇಡ್‌ನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿ 516 ಜನ ಭಾಗಿಯಾಗಿದ್ದರು. ಅಲ್ಲದೇ ಭದ್ರತೆ ಸೇರಿ 2 ಸಾವಿರ ಪೊಲೀಸರು ಪಾಲ್ಗೊಂಡಿದ್ದರು. ಇದನ್ನೂ ಓದಿ: 77ನೇ ಗಣರಾಜ್ಯೋತ್ಸವ ಸಂಭ್ರಮ – ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ


