ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದ್ದು, ಇಂದು ಶೇ.0.55ರಷ್ಟು ದಾಖಲಾಗಿದೆ. 787 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 11 ಜನರನ್ನು ಮಹಾಮಾರಿ ಬಲಿ ಪಡೆದಿದೆ.
ಇಂದು 775 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 13,307 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,72,620 ಜನರಿಗೆ ಕೊರೊನಾ ಸೋಂಕು ತಗುಲಿದೆ. 29,21,567 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.55ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.39ಕ್ಕೆ ಇಳಿದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
ಇಂದು ರಾಜ್ಯದಲ್ಲಿ ಒಟ್ಟು 2,26,786 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,40,832 ಸ್ಯಾಂಪಲ್ (ಆರ್ಟಿ ಪಿಸಿಆರ್ 1,11,101+ 29,731 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 4 ಜನ ಮರಣ ಹೊಂದಿದ್ದಾರೆ. 279 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 1, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 276, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 27, ಚಿತ್ರದುರ್ಗ 7, ದಕ್ಷಿಣ ಕನ್ನಡ 127, ದಾವಣಗೆರೆ 1, ಧಾರವಾಡ 6, ಹಾಸನ 19, ಕಲಬುರಗಿ 1, ಕೊಡಗು 25, ಕೋಲಾರ 22, ಮಂಡ್ಯ 9, ಮೈಸೂರು 65, ರಾಯಚೂರು 1, ರಾಮನಗರ 2, ಶಿವಮೊಗ್ಗ 21, ತುಮಕೂರು 29, ಉಡುಪಿ 68, ಉತ್ತರ ಕನ್ನಡ 27 ಹಾಗೂ ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ.