ಬೆಂಗಳೂರು: ʻಪಬ್ಲಿಕ್ ಟಿವಿʼಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು (Independence Day) ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ʻಪಬ್ಲಿಕ್ ಟಿವಿʼಯ ಮುಖ್ಯ ಸಂಪಾದಕರಾದ ದಿವಾಕರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ, ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.