Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಿದೆ – ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಮಾತು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಿದೆ – ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಮಾತು

Public TV
Last updated: August 15, 2025 10:53 am
Public TV
Share
9 Min Read
Independence day Siddaramaiah 2
SHARE

ಬೆಂಗಳೂರು: ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ, ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನ್, ಇಂಟರ್ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದರು.

ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ, ಸ್ವರಾಜ್ಯದ ಸಂಕೇತ ಮತ್ತು ಸಮಸ್ತ ಶಕ್ತಿಯಾದ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟೀಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ.

Siddaramaiah 5

ಸ್ವಾತಂತ್ರ್ಯಾ ನಂತರ ದೇಶದ ರಕ್ಷಣೆಗಾಗಿ ನಡೆದ ಯುದ್ಧಗಳಲ್ಲಿ, ಸಂಘರ್ಷಗಳಲ್ಲಿ ಅಸಂಖ್ಯಾತ ಸೈನಿಕರು ಹುತಾತ್ಮರಾಗಿದ್ದಾರೆ. ಪ್ರಧಾನ ಮಂತ್ರಿಗಳಾಗಿದ್ದವರು ಸಹ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಕಟ್ಟಿ ಬೆಳೆಸುವ ಕೈಂಕರ್ಯದಲ್ಲಿ ಅಸಂಖ್ಯಾತ ಕಾರ್ಮಿಕರು, ರೈತರು, ವಿದ್ವಾಂಸರು, ವಿಜ್ಞಾನಿಗಳು, ಶಿಕ್ಷಕರು, ಹೋರಾಟಗಾರರೂ ಸೇರಿದಂತೆ ಸಮಸ್ತ ಉತ್ಪಾದಕ ವರ್ಗಗಳ ಜನರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಅವರೆಲ್ಲರನ್ನು ಈ ಸುಸಂದರ್ಭದಲ್ಲಿ ಸ್ಮರಿಸಲೇಬೇಕಾಗಿದೆ ಎಂದರು.

ಇತ್ತೀಚೆಗೆ ತಾನೆ ಪಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮಡಿದವರು ಹಾಗೂ ಆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಎಲ್ಲರನ್ನೂ ಋಣಪೂರ್ವಕವಾಗಿ ದೇಶವು ನೆನಪಿಡುತ್ತದೆ. ಅವರೆಲ್ಲರ ಧೀರೋದಾತ್ತ ಹೋರಾಟವನ್ನು ವಿನೀತ ಭಾವದಿಂದ ತಲೆಬಾಗಿ ಗೌರವಿಸುತ್ತದೆ.

ನಮ್ಮ ಹೆಮ್ಮೆಯ ನವಭಾರತದ ನಿರ್ಮಾಣದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ ಮಹಾನ್ ವ್ಯಕ್ತಿಗಳ ಮಾತುಗಳನ್ನು ನೆನಪಿಸಿಕೊಳ್ಳುವುದು ಈ ಸಂದರ್ಭದಲ್ಲಿ ಔಚಿತ್ಯಪೂರ್ಣ ಎನ್ನಿಸಿದೆ. ಪಂಡಿತ್ ಜವಾಹರ್ಲಾಲ್ ನೆಹರೂ ಅವರ ಪ್ರಕಾರ `ದೇಶ ಸೇವೆ ಎಂದರೆ ಸಂಕಷ್ಟದಲ್ಲಿರುವ ಕೋಟ್ಯಾಂತರ ಜನರ ಸೇವೆ. ಬಡತನ, ಅಜ್ಞಾನ, ರೋಗ ರುಜಿನಗಳಲ್ಲಿ ನರಳುವವರ ಬದುಕನ್ನು ನೇರ್ಪು ಮಾಡುವುದು’ ಎಂದಿದ್ದಾರೆ.

Siddaramaiah Flag Hosting

ರಾಜ್ಯದ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಿದ ಗ್ಯಾರಂಟಿ
ನುಡಿದಂತೆ ನಡೆಯಬೇಕು ಎಂಬುದು 12ನೇ ಶತಮಾನದ ಬಸವಾದಿ ಶರಣರ ನಿಶ್ಚಲ ನಿಲುವು. ನಮ್ಮ ಸರ್ಕಾರ ಈ ಧ್ಯೇಯ ವಾಕ್ಯದಲ್ಲಿ ನಂಬಿಕೆಯಿಟ್ಟು ರಾಜ್ಯವು ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ’ ಕರ್ನಾಟಕ ಅಭಿವೃದ್ಧಿ ಮಾದರಿ’ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಫಿಲೆಮಾನ್ ಯಾಂಗ್ರವರು ಕರ್ನಾಟಕಕ್ಕೆ ಬಂದು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಮೂಲಕ ನಮ್ಮ ಯೋಜನೆಗಳು ವಿಶ್ವಮಾನ್ಯಗೊಂಡಿವೆ.

ದೇಶದ ಪ್ರಮುಖ ಸಂಸ್ಥೆಗಳು ಮಾಡಿರುವ ಸಮೀಕ್ಷೆಗಳ ಪ್ರಕಾರ 10% ರಷ್ಟಿರುವ ಶ್ರೀಮಂತರ ಬಳಿ 80% ರಷ್ಟು ಸಂಪತ್ತು ಶೇಖರಣೆಯಾಗಿದೆ. ಆದರೆ 10% ಜನ ಕೇವಲ 3% ರಷ್ಟು ಮಾತ್ರ ಜಿಎಸ್‍ಟಿ ಪಾವತಿಸುತ್ತಿದ್ದರೆಂದು ಅಧ್ಯಯನಗಳು ಹೇಳುತ್ತಿವೆ. ಉಳಿದ 90% ರಷ್ಟು ಜನ ಹೊಟ್ಟೆ-ಬಟ್ಟೆಗೆ ದುಡಿಯುವವರಾದ್ದರಿಂದ 97% ರಷ್ಟು ಜಿಎಸ್‍ಟಿ ಪಾವತಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಯಾವ ಆರ್ಥಿಕತೆ ಮುಂದುವರೆಯಲು ಸಾಧ್ಯ? ಸಂವಿಧಾನದ ಆಶಯಗಳನ್ನು ಈಡೇರಿಸುವುದು ಹೇಗೆ? ಬೃಹದಾಕಾರವಾಗಿ ಬೆಳೆಯುತ್ತಿರುವ ಅಸಮಾನತೆಯನ್ನು ತಗ್ಗಿಸುವುದು ಹೇಗೆ? ಎಂಬ ಪ್ರಶ್ನೆಗಳು ನಮ್ಮನ್ನು ಬಾಧಿಸಲಾರಂಭಿಸಿದವು. ಈ ಬೃಹತ್ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರೆ ಜನ ಕಲ್ಯಾಣದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ.

Independence day Siddaramaiah 3

ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿವೆ. 2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆರಂಭಿಸಿದೆವು. ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್ಪುಗಳ ಮೂಲಕ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದನ್ನು ಇತ್ತೀಚೆಗೆ ಆಚರಣೆ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಜನರಿಗೆ ತಲುಪುವ ಈ ಯೋಜನೆಗಳು ರಾಜ್ಯದ ಜನರ ತಲಾದಾಯವನ್ನು ಹೆಚ್ಚಿಸುತ್ತಿರುವುದಲ್ಲದೆ ಕಾರ್ಮಿಕ ಶಕ್ತಿಯಲ್ಲಿಮಹಿಳೆಯರ ಭಾಗವಹಿಸುವಿಕೆಯನ್ನು ಶೇ.23 ರಷ್ಟು ಹೆಚ್ಚಿಸಿವೆ ಎಂದು ಹಲವು ಅಧ್ಯಯನಗಳು ಹೇಳುತ್ತಿವೆ. ನಾವು ಶಕ್ತಿ ಯೋಜನೆಯನ್ನು ಜಾರಿಗೊಳಿಸುವುದರ ಜೊತೆಗೆ ಸಾರಿಗೆ ಇಲಾಖೆಗೆ ವಿವಿಧ ಮಾದರಿಯ ವಾಹನಗಳು ಸೇರಿದಂತೆ ಒಟ್ಟು 5,049 ಹೊಸ ಬಸ್ಸುಗಳ ಖರೀದಿ ಮತ್ತು 8,473 ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದೇವೆ.

ಕರ್ನಾಟಕವು ಈಗ ತಲಾದಾಯದ ವಿಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ.101 ರಷ್ಟು ಪ್ರಗತಿಯನ್ನು ಸಾಧಿಸಿದ ರಾಜ್ಯ ನಮ್ಮ ಕರ್ನಾಟಕವಾಗಿದೆ. 2013-14 ರಲ್ಲಿ ಸ್ಥಿರ ದರಗಳಲ್ಲಿ 1,01,858 ರೂ. ಇದ್ದ ತಲಾ ಆದಾಯವು 2024-25 ರ ವೇಳೆಗೆ 2,04,605 ರೂ. ತಲುಪಿದೆ.

ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಸಹಾಯಧನ, ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ, ಸಾಮಾಜಿಕ ಯೋಜನೆಗಳಿಗಾಗಿ ವಿನಿಯೋಗಿಸುತ್ತಿರುವ ಪಿಂಚಣಿ ಮುಂತಾದವುಗಳಿಗಾಗಿ 1.12 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಜನ ಕಲ್ಯಾಣಕ್ಕಾಗಿ ಖರ್ಚು ಮಾಡುತ್ತಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ನವೆಂಬರ್ 25, 1949 ರಂದು ತಮ್ಮ ಸಂವಿಧಾನ ಸಮರ್ಪಣಾ ಭಾಷಣದಲ್ಲಿ, “ನಾವು ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ಸಂತೃಪ್ತರಾಗಬಾರದು. ರಾಜಕೀಯ ಪ್ರಜಾಪ್ರಭುತ್ವಕ್ಕೆ ಆಧಾರವಾಗಿ ಆರ್ಥಿಕ ಪ್ರಜಾಪ್ರಭುತ್ವವನ್ನು ಏರ್ಪಡಿಸಿಕೊಳ್ಳಬೇಕು. ಆರ್ಥಿಕ ಪ್ರಜಾಪ್ರಭುತ್ವದ ಬುನಾದಿ ಇಲ್ಲದೆ ಹೋದರೆ, ರಾಜಕೀಯ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ. ಸಾಮಾಜಿಕ ಪ್ರಜಾಪ್ರಭುತ್ವವೂ ಬಹಳ ಮುಖ್ಯ. ಸ್ವಾತಂತ್ರ್ಯವನ್ನು ಸಮಾನತೆಯಿಂದ ಬೇರ್ಪಡಿಸುವಂತಿಲ್ಲ. ಹಾಗೆ ಬೇರ್ಪಡಿಸಿದರೆ ಕೆಲವರ ಸರ್ವಾಧಿಕಾರವಾಗುತ್ತದೆ. ಸ್ವಾತಂತ್ರ್ಯ ಮತ್ತು ಸಮಾನತೆಗಳನ್ನೂ ಬಂಧುತ್ವದಿಂದ ಬೇರ್ಪಡಿಸುವಂತಿಲ್ಲ”ಎಂದಿದ್ದಾರೆ.

ಬಲಾಢ್ಯರು ಮಾತ್ರ ಬದುಕಬೇಕು ಉಳಿದವರು ಗುಲಾಮರಾಗಿ ಬಲಾಢ್ಯರಿಗಾಗಿ ದುಡಿಯಬೇಕು ಎನ್ನುವ ಮನುವಾದಿ ಸಿದ್ಧಾಂತದ ಮಾದರಿಯೇ ಸಾಮಾಜಿಕ ಡಾರ್ವಿನ್‌ ವಾದ. ಈ ಮೃಗೀಯ ಸಿದ್ಧಾಂತಕ್ಕೆ ಎದುರಾಗಿ ಅಸಹಾಯಕರಿಗೆ ಮೊದಲು ಆದ್ಯತೆ ಸಿಗಬೇಕು ಎನ್ನುವುದು ನಮ್ಮ ಸಂವಿಧಾನವಾದ. ಆದ್ದರಿಂದ ನಾವು ಸಂವಿಧಾನದ ಉಳಿವಿಗಾಗಿ ಪಣ ತೊಡೋಣ.

Independence day Siddaramaiah

ಜನರ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ. ಸಮರ್ಪಕವಾದ ಅಂಕಿ-ಅಂಶಗಳು ಮಾತ್ರ ಜನರ ಬದುಕಿನ ಗತಿಯನ್ನು ಬದಲಾಯಿಸಲು ಕಾರಣವಾಗಬಲ್ಲವು. ನಮ್ಮ ಮೊದಲ ಆದ್ಯತೆ ಅಂಕಿ-ಅಂಶಗಳ ಸಂಗ್ರಹ. ಆ ನಂತರ ರೂಪಿಸುವ ಯೋಜನೆಗಳಲ್ಲಿ ವಿಶೇಷ ಪ್ರಾತಿನಿಧ್ಯ ಕೊಡಬೇಕಾಗುತ್ತದೆ. ಹಾಗೆ ಮಾಡದಿದ್ದರೆ ನಾವು ನಮ್ಮ ಸಂವಿಧಾನಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಅನ್ಯಾಯ ಮಾಡುತ್ತಿದ್ದೇವೆ ಎಂದು ಭಾವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿಯೆ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವಿಚಾರಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಮಾದರಿಗೆ 250ಕ್ಕಿಂತ ಹೆಚ್ಚಿನ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಇಂಡಿಯಾ ಜಸ್ಟೀಸ್ ರಿಪೆÇೀರ್ಟ್ ವರದಿಗಳ ಪ್ರಕಾರ ನಮ್ಮ ರಾಜ್ಯವು ನ್ಯಾಯ ವ್ಯವಸ್ಥೆ, ಪೊಲೀಸ್, ಕಾನೂನು ಸುವ್ಯವಸ್ಥೆ, ಕಾನೂನು ನೆರವು ಮುಂತಾದ ವಿಚಾರಗಳಲ್ಲಿ ಇಡೀ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ.
‌
ರಾಜ್ಯದಲ್ಲಿ ಉತ್ತಮ ಮುಂಗಾರು
ರಾಜ್ಯದಲ್ಲಿ ಉತ್ತಮವಾದ ಮುಂಗಾರು ಮಳೆಯಾಗುತ್ತಿದೆ. ಅಣೆಕಟ್ಟೆಗಳು ತುಂಬಿವೆ. ರೈತರ ಮುಖದಲ್ಲಿ ಮಂದಹಾಸವಿದೆ.ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಿನ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. 2024-25ರಲ್ಲಿ ಕೂಡ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ಬೆಳೆಯಲಾಗಿದೆ. ಹಿಂದಿನ ಸರ್ಕಾರವು ಎಪಿಎಂಸಿಗಳನ್ನು ಖಾಸಗೀಕರಿಸಿ ರೈತರ ಬದುಕನ್ನು ಕಾರ್ಪೋರೇಟ್ ಬಂಡವಾಳಿಗರ ಕೈಗೆ ಕೊಡಲು ಹೊರಟಿತ್ತು. ಆದರೆ, ನಮ್ಮ ಸರ್ಕಾರವು ಎಪಿಎಂಸಿಗಳನ್ನು ಬಲಿಷ್ಠಗೊಳಿಸಿದ ಕಾರಣ 2024-25 ರಲ್ಲಿ 164 ಲಕ್ಷ ಮೆಟ್ರಿಕ್ ಟನ್ನುಗಳಷ್ಟು ಕೃಷಿ ಉತ್ಪನ್ನಗಳು ಆವಕವಾಗಿದ್ದು 447% ರಷ್ಟು ಹೆಚ್ಚಿನ ಪ್ರಮಾಣವಾಗಿದೆ. ಇದು ರಾಜ್ಯದ ಎ.ಪಿ.ಎಂ.ಸಿ.ಗಳ ಇತಿಹಾಸದಲ್ಲಿಯೇ ದಾಖಲೆಯಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಬೆಲೆ ಕುಸಿತ ಕಂಡ ಕಾರಣ ಮಾವು ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಿದ್ದೇವೆ. ವಿವಿಧ ಕಾರಣಗಳಿಂದ ಬೆಳೆ ಹಾನಿಯಾದ ತೊಗರಿಗೂ ಪರಿಹಾರ ನೀಡಿದ್ದೇವೆ. ಅಡಿಕೆ ಮತ್ತು ತೆಂಗನ್ನು ಬಾಧಿಸುತ್ತಿರುವ ರೋಗಗಳ ನಿವಾರಣೆಗೆ ಈ ಸಾಲಿನ ಬಜೆಟ್ನಲ್ಲಿ ಅನುದಾನಗಳನ್ನು ಒದಗಿಸಿದ್ದೇವೆ. ನಮ್ಮ ಸರ್ಕಾರವು “ಕೃಷಿ ಮೊದಲು ಸರ್ವಕ್ಕೆ, ಕೃಷಿಯಿಂದ ಪಸರಿಸುವುದು ಆ ಕೃಷಿಯನು ಉದ್ಯೋಗಿಸುವ ಜನವನು ಪಾಲಿಸುವುದು ಆ ಜನಪದದ ಜನದಿ ವಸು ತೆರಳುವುದು”ಎಂಬ ಕುಮಾರವ್ಯಾಸನ ಪರಿಕಲ್ಪನೆಯನ್ನು ಅಕ್ಷರಶಃ ನಂಬಿ ಮುನ್ನಡೆಯುತ್ತಿದೆ.

Independence day Siddaramaiah 1

ಕೃಷಿ ವಲಯಕ್ಕೆ 2025-26ರ ಬಜೆಟ್ ನಲ್ಲಿ 51,339 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. 2022-23 ಕ್ಕೆ ಹೋಲಿಸಿದರೆ ಶೇ.52.34 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿ ಕೃಷಿ ವಲಯವನ್ನು ಬಲಪಡಿಸುತ್ತಿದ್ದೇವೆ. ಇಷ್ಟರ ನಡುವೆಯೂ ನಮಗೆ ಬೇಕಾಗಿರುವಷ್ಟು ಯೂರಿಯಾವನ್ನು ಒಕ್ಕೂಟ ಸರ್ಕಾರ ಪೂರೈಸುತ್ತಿಲ್ಲ, ಇದರಿಂದ ಸ್ವಲ್ಪ ಸಮಸ್ಯೆಗಳಾಗಿವೆ. ಈ ಸಮಸ್ಯೆಯನ್ನು ಕೂಡಲೆ ಪರಿಹರಿಸಬೇಕೆಂದು ಒಕ್ಕೂಟ ಸರ್ಕಾರವನ್ನು ಆಗ್ರಹಿಸುತ್ತೇನೆ.

“ರಿವಾರ್ಡ್”ಎಂಬ ಯೋಜನೆಯಡಿ 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ ಸಂಪನ್ಮೂಲ ಸಮೀಕ್ಷೆ (ಐಖI) ಕೈಗೊಳ್ಳಲಾಗಿದೆಯಲ್ಲದೆ ರಾಷ್ಟ್ರದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಣ್ಣಿನ ಗುಣಲಕ್ಷಣ ಪೋಷಕಾಂಶ ಮತ್ತು ಸೂಕ್ತ ಬೆಳೆಯ ಮಾಹಿತಿ ಹೊಂದಿರುವ ಐಖI ಕಾರ್ಡ್ ಗಳನ್ನು 8 ಲಕ್ಷ ರೈತರಿಗೆ ವಿತರಿಸಲಾಗಿರುತ್ತದೆ.

ರಾಜ್ಯದ ಹೈನುಗಾರಿಕೆಯನ್ನು ‌ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆ.ಎಂ.ಎಫ್.ನಿಂದ “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯೊಂದಿಗೆ “ನಂದಿನಿ” ಬ್ರ್ಯಾಂಡ್ನಲ್ಲಿ 175 ಕ್ಕೂ ಅಧಿಕ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ರಾಜ್ಯ, ಹೊರರಾಜ್ಯ ಮತ್ತು ವಿದೇಶಗಳ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದಿನ ಸರ್ಕಾರ ಬಾಕಿಯಿರಿಸಿದ್ದ 609 ಕೋಟಿ ರೂ.ಗಳನ್ನೂ ಸೇರಿಸಿ ಇದುವರೆಗೆ 3283 ಕೋಟಿ ರೂ.ಗಳನ್ನು ಪ್ರೋತ್ಸಾಹ ಧನವನ್ನು ನಮ್ಮ ಹೈನುಗಾರರ ಕುಟುಂಬಗಳಿಗೆ ಪಾವತಿಸಲಾಗಿದೆ.

ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ
ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವತ್ತೂ ಹಿಂದೆ ಬಿದ್ದಿಲ್ಲ. ರಾಜ್ಯದಲ್ಲಿರುವ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳನ್ನು ನಿರ್ವಹಿಸಲು ಮತ್ತು ಜಾಗತಿಕ ಉತ್ಪಾದನಾ ತಾಣಗಳಾಗಿ ಅಭಿವೃದ್ಧಿ ಪಡಿಸಲು, ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಒದಗಿಸುವ ಉದ್ದೇಶದಿಂದ 44,166 ಎಕರೆ ಪ್ರದೇಶವುಳ್ಳ 18 ಕೈಗಾರಿಕಾ ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶಗಳೆಂದು ಘೋಷಿಸಲಾಗಿದೆ. ಇವುಗಳ ಜೊತೆಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೂ ಆದ್ಯತೆ ನೀಡುತ್ತಿದ್ದೇವೆ. 10 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ಕೈಗಾರಿಕಾ ಕ್ಷೇತ್ರದಲ್ಲಿ ರಾಜ್ಯವು ದೇಶದ ಮುಂಚೂಣಿ ರಾಜ್ಯಗಳ ಹಾದಿಯಲ್ಲಿದ್ದು ರಾಜ್ಯದ ಜಿ.ಎಸ್.ಡಿ.ಪಿ.ಗೆ ಶೇ.23.6 ರಷ್ಟು ಕೊಡುಗೆಯನ್ನು ನೀಡುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರವಾಸಿಗರಿಗೆ ಮೂಲಸೌಕರ್ಯಗಳನ್ನು ಹಾಗೂ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಹೊಸ `ಪ್ರವಾಸೋದ್ಯಮ ನೀತಿ’ಯನ್ನು ಜಾರಿಗೊಳಿಸಿದ್ದೇವೆ ಎಂದರು.

ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ಸಾಲಿನಲ್ಲಿ 65,000 ಕೋಟಿ ರೂ.ಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲಗಳನ್ನು ವಿನಿಯೋಗಿಸುತ್ತಿದ್ದೇವೆ. ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ವಸತಿ ಶಾಲೆಗಳ ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣ 98-99% ರಷ್ಟಿದೆ ಎಂಬುದು ಸಂತೋಷದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ.

500 ಕರ್ನಾಟಕ ಪಬ್ಲಿಕ್ ಸ್ಕೂಲ್-ಕೆಪಿಎಸ್ ಶಾಲೆಗಳ ಸ್ಥಾಪನೆ
ಈ ವರ್ಷ 2,500 ಕೋಟಿ. ರೂ. ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್-ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುತ್ತಿದ್ದೇವೆ. 53 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್, ಹಾಲು, ವಾರದ ಎಲ್ಲಾ ದಿನ ಮೊಟ್ಟೆ ಅಥವಾ ಬಾಳೆಹಣ್ಣು, ಮಧ್ಯಾಹ್ನದ ಬಿಸಿಯೂಟ ನೀಡುತ್ತಿದ್ದೇವೆ. ಅತಿಥಿ ಶಿಕ್ಷಕರಿಗೆ ಮತ್ತು ಬಿಸಿಯೂಟ ತಯಾರಿಸುವ ಸಿಬ್ಬಂದಿಗಳಿಗೆ ಗೌರವಧನ ಹೆಚ್ಚಿಸಿದ್ದೇವೆ. ಶಿಕ್ಷಕರ ನೇಮಕಾತಿಗೂ ಆದ್ಯತೆ ನೀಡುತ್ತಿದ್ದೇವೆ. 2,500 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ಗಳನ್ನು ಉನ್ನತೀಕರಿಸುತ್ತಿದ್ದೇವೆ. 13 ಹೊಸ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿದ್ದೇವೆ.

ಪ್ರಜಾಪ್ರಭುತ್ವದ ಮೌಲ್ಯ ಜೀವಕ್ಕಿಂತ ಮಿಗಿಲು
ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕರ್ನಾಟಕವನ್ನು ನಿರ್ಮಾಣ ಮಾಡುವುದರ ಮೂಲಕ ಸಶಕ್ತ ಭಾರತವನ್ನು ಕಟ್ಟೋಣ. ಸ್ವಾತಂತ್ರ್ಯ, ಸಂವಿಧಾನ ಹಾಗೂ ನೈಜ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಕ್ಕಿಂತ ಮಿಗಿಲು ಎಂದು ಭಾವಿಸೋಣ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳನ್ನು ನಿರಂತರವಾಗಿ ರಕ್ಷಿಸಿಕೊಳ್ಳುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣಗೊಳಿಸೋಣ ಎಂದಿದ್ದಾರೆ.

Share This Article
Facebook Whatsapp Whatsapp Telegram
Previous Article darshan prajwal revanna ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ
Next Article pm modi 3 ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

Latest Cinema News

Multiplex Theatre
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
Bengaluru City Cinema Karnataka Latest Top Stories
Vishnuvardhan 1
ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಹೈಕೋರ್ಟ್ ಬ್ರೇಕ್
Cinema Court Latest Sandalwood South cinema Top Stories
Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories

You Might Also Like

Robbery of Rs 8 crore cash 50 kg gold jewellery at gunpoint to SBI staff chadchana Vijayapur
Districts

ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

2 hours ago
Manjunath Bhandari DK Udupi Tourism
Bengaluru City

ದ.ಕ.-ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ‘ಮಾಸ್ಟರ್ ಪ್ಲಾನ್’!

3 hours ago
Haveri Rudrappa Lamani
Districts

ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ವೈದ್ಯರ ಉತ್ತಮ ಸೇವೆ, ರೋಗಿಗಳ ಪ್ರಮಾಣ ಹೆಚ್ಚಳ: ರುದ್ರಪ್ಪ ಲಮಾಣಿ

4 hours ago
muda scam former commissioner dinesh kumar arrested by ed
Bengaluru City

ಮುಡಾ ಹಗರಣ – ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿಯಿಂದ ಅರೆಸ್ಟ್‌

4 hours ago
Shahid Afridi 1
Cricket

ಪಾಕ್ ಜೊತೆ ಮಾತುಕತೆಗೆ ರಾಹುಲ್ ನಂಬಿಕೆ: ಆಫ್ರಿದಿ ಶ್ಲಾಘನೆ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?