ತುಮಕೂರು: ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದಿದೆ.
ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಹೆದರಿ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹಠ ಮಾಡಿದ್ದನು. ಬಾಲಕನ ಮನವೊಲಿಸಿದ್ದ ಪೋಷಕರು ಶಾಲೆಗೆ ಕಳುಹಿಸಿದ್ದರು. ಆದರೆ ಧೃತಿಗೆಟ್ಟ ಬಾಲಕ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Advertisement
Advertisement
ಶಾಲೆಗೆ ಹೋಗುವುದಿಲ್ಲ ಎಂದು ಕ್ರಿಮಿನಾಶಕ ಸೇವಿಸಿ ಅಸ್ವಸ್ಥನಾಗಿ ಮನೆಯಲ್ಲಿಯೇ ಬಾಲಕ ಕುಸಿದು ಬಿದ್ದಿದ್ದನು. ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್
Advertisement
ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ ಇವನಾಗಿದ್ದು, ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿರುವ ಸೋಮಶೇಖರ್ ದಂಪತಿ ಮಗನ ಕೃತ್ಯದಿಂದ ಕಂಗಲಾಗಿದ್ದಾರೆ. ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ದಂಪತಿ ವಲಸೆ ಬಂದಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ
Advertisement
ತುಮಕೂರಿನ ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕನಿಗೆ 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಶಾಲೆಗೆ ಸೇರಿಸಲಾಗಿತ್ತು. ಮೇ 16ನೇ ತಾರೀಖಿನಿಂದ ಶಾಲೆ ಶುರುವಾಗಿದ್ದು, ಬಾಲಕ ಒಂದೆರಡು ದಿನ ಶಾಲೆಗೆ ಸರಿಯಾಗಿ ಹೋಗಿದ್ದನು. ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದಾನೆ. ಇದೀಗ ಈ ವಿಚಾರ ತಿಳಿಯುತ್ತಿದ್ದಂತೆ ಬಿಇಒ ಹನುಮನಾಯಕ್ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕನ ಆರೋಗ್ಯ ವಿಚಾರಿಸಿದ್ದಾರೆ.