ನವದೆಹಲಿ: ಕ್ರಿಕೆಟ್‍ನಲ್ಲಿ ಬದ್ಧವೈರಿಗಳಾಗಿ ಗುರುತಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು 8 ವರ್ಷಗಳ ಬಳಿಕ ಮತ್ತೆ ಎದುರುಬದುರಾಗುವ ನೀರಿಕ್ಷೆ ಇದೆ. ಈ ಕುರಿತು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತದೊಂದಿಗೆ ಮಾತುಕತೆ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Advertisement
ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಕಾಶ್ಮೀರ ಗಡಿ ವಿಚಾರವಾಗಿ ಮತ್ತು ಇತರ ಸಮಸ್ಯಗಳಿಂದಾಗಿ ಸಂಬಂಧ ಕಡಿತಗೊಂಡಿತು. ಹಾಗಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಸರಣಿಯು ಕೂಡ ನಡೆಯುತ್ತಿರಲಿಲ್ಲ.
Advertisement
ಭಾರತ ಹಾಗೂ ಪಾಕಿಸ್ತಾನ ನಡುವೆ 8 ವರ್ಷಗಳ ಹಿಂದೆ 2012-2013 ರಲ್ಲಿ ಕ್ರಿಕೆಟ್ ಸರಣಿಯ ಬಳಿಕ ಈ ವರೆಗೆ ಈ ಎರಡು ದೇಶಗಳು ದ್ವಿಪಕ್ಷೀಯ ಸರಣಿ ಆಡಿಲ್ಲ. ಈ ಎರಡು ತಂಡಗಳು ಐಸಿಸಿ ಏರ್ಪಡಿಸುವ ಟೂರ್ನಿಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದವು. ಆದರೆ ಇದೀಗ ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವಿನ ರಾಜತಾಂತ್ರಿಕ ಸಮಸ್ಯೆ ಬಗ್ಗೆ ಎರಡು ದೇಶಗಳು ಮಾತುಕತೆ ನಡೆಸಿದ ಬೆನ್ನಲೇ ಕ್ರಿಕೆಟ್ ಸರಣಿ ಆಯೋಜಿಸುವ ಕುರಿತು ನಿರ್ಧರಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದೆ.
Advertisement
Advertisement
ಪಾಕಿಸ್ತಾನದ ಮಾಧ್ಯಗಳ ವರದಿ ಪ್ರಕಾರ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ಗಿಂತ ಮೊದಲು ಭಾರತ ಹಾಗೂ ಪಾಕಿಸ್ತಾನ ನಡುವೆ ಚುಟುಕು ಕ್ರಿಕೆಟ್ ಸರಣಿ ನಡೆಸಲು ಚಿಂತನೆ ನಡೆದಿದ್ದು, ಪಾಕಿಸ್ತಾನ ಸರ್ಕಾರ, ಪಿಸಿಬಿಗೆ ತಂಡವನ್ನು ರಚಿಸಿ ತಯಾರಿ ನಡೆಸಲು ಅಧಿಕಾರಿ ವರ್ಗಕ್ಕೆ ತಿಳಿಸಿದೆ ಎಂದು ವರದಿಯಾಗಿದೆ.
ಈ ಕುರಿತು ಪಿಸಿಬಿ ಅಧ್ಯಕ್ಷರಾದ ಎಹ್ಸಾನ್ ಮಣಿ ಪ್ರತಿಕ್ರಿಯಿಸಿದ್ದು, ಬಿಸಿಸಿಐನ ಯಾವುದೇ ಅಧಿಕಾರಿಗಳು ಕ್ರಿಕೆಟ್ ಸರಣಿ ಬಗ್ಗೆ ನಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದಿದ್ದಾರೆ. ಅದರೆ ಮೂಲಗಳ ಪ್ರಕಾರ ಭಾರತ ಹಾಗೂ ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ನಡೆಯುವುದು ಖಚಿತ ಎಂದು ಸುದ್ದಿ ಬಿತ್ತರವಾಗುತ್ತಿದೆ.
ಈ ಎಲ್ಲಾ ಆಗುಹೋಗುಗಳ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಜಯದ ಬಳಿಕ ನಾವು ಟಿ20 ವಿಶ್ವಕಪ್‍ಗೂ ಮುನ್ನ ಹಲವು ಟಿ20 ಪಂದ್ಯಗಳನ್ನು ಆಡಲಿದ್ದೇವೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ಭಾರತ ಹಾಗೂ ಪಾಕಿಸ್ತಾನ ಸರಣಿಗೆ ಪುಷ್ಟಿ ಕೊಡುವಂತಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಸರಣಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿಲಿದ್ಯಾ ಅಥವಾ ಪಾಕಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಾ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.