ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಇದುವರೆಗೆ 8 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹರ್ಷನ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಭದ್ರಾವತಿ ಬಳಿ ವಶಕ್ಕೆ ಪಡೆದಿದ್ದಾರೆ.
Advertisement
ವಿಚಾರಣೆ ತೀವ್ರಗೊಳಿಸಿರುವ ಪೊಲೀಸರು ಎಲ್ಲಾ ಆರೋಪಿಗಳು ಎ1 ಆರೋಪಿ ಖಾಸೀಫ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ವಿಚಾರ ಕಾಲ್ ಡಿಟೇಲ್ಸ್‌ನಲ್ಲಿ ಪತ್ತೆ ಹಚ್ಚಿದ್ದಾರೆ. ಆದ್ರೆ ಇದುವರೆಗೂ ಹರ್ಷ ಮೊಬೈಲ್ ಸಿಕ್ಕಿಲ್ಲ. ಮೊಬೈಲ್‍ನ ಟ್ರೇಸ್ ಮಾಡ್ತಿದ್ದೀವಿ ಎಂದು ಎಸ್‍ಪಿ ತಿಳಿಸಿದ್ದಾರೆ. ಹರ್ಷ ಕೊಲೆ ಕೇಸನ್ನು ಎನ್‍ಐಎಗೆ ವಹಿಸೋ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಹಿಂದೂಗಳಿಗೆ ಮುಸ್ಲಿಂ ಸಹೋದರರ ಸಾಂತ್ವನ
Advertisement
ಈ ಮಧ್ಯೆ, ಹತ್ಯೆ ನಂತರ ನಡೆದ ಗಲಭೆ ಸಂಬಂಧ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಜಾಯಿಂಟ್ ಆಕ್ಷನ್ ಕಮಿಟಿ ಆಪಾದಿಸಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕೆಲ ಬಿಜೆಪಿ ನಾಯಕರು ಗಲ್ಲುಶಿಕ್ಷೆ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.
Advertisement
Advertisement
ಸಿದ್ದರಾಮಯ್ಯ ಸರ್ಕಾರದ 5 ವರ್ಷ ಆಡಳಿತಾವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ. ಈ ಪೈಕಿ ಒಂದು ಕೇಸ್ ಕೂಡ ತಾರ್ಕಿಕ ಅಂತ್ಯ ಕಂಡಿಲ್ಲ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕೊಲೆಗಡುಕ ಸರ್ಕಾರ ಎಂದಿದ್ದ ಬಿಜೆಪಿ ನಾಯಕರು, ಈಗ ಅಧಿಕಾರಕ್ಕೆ ಬಂದ ಮೇಲೆ ಈ ಕೇಸ್‍ಗಳನ್ನು ಮರೆತೆ ಬಿಟ್ಟಿದ್ದಾರೆ. ಹತ್ಯೆ ಆರೋಪ ಹೊತ್ತವರು ಜಾಮೀನಿನ ಮೇಲೆ ತಿರುಗಾಡುತ್ತಿದ್ದಾರೆ. ಕೆಲ ಪ್ರಕರಣಗಳಲ್ಲಿ ಮಾತ್ರ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಮೌನವಾಗಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರಲು ಮಾತ್ರ ಹಿಂದೂ ಕಾರ್ಯಕರ್ತರ ಕೊಲೆಯನ್ನು ದಾಳವಾಗಿ ಬಳಸಿಕೊಳ್ಳುತ್ತೆ ಎಂಬ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಮುಸ್ಲಿಂನವರ ಕೊಲೆಯಾಗಿದ್ರೆ ರಾಹುಲ್, ಸೋನಿಯಾ ಗಾಂಧಿ ಬರ್ತಿದ್ರು: ಯತ್ನಾಳ್