ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಬಂಧಿತ ಆರೋಪಿಗಳು. ಇದನ್ನೂ ಓದಿ: ಸುಹಾಸ್ ಹತ್ಯೆ ಕೇಸ್ – ಫಾಝಿಲ್ ಸಹೋದರನೇ ಪ್ರಮುಖ ಆರೋಪಿ
ಸುಹಾಸ್ ಶೆಟ್ಟಿಯನ್ನು ಪ್ರತೀಕಾರದ ಹತ್ಯೆ ಮಾಡಿದ್ದೇವೆ ಎಂದು ಬಂಧಿತ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಸುಫಾರಿ ಹಂತಕರು ಐದು ಲಕ್ಷಕ್ಕಾಗಿ ನಡುರಸ್ತೆಯಲ್ಲೇ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ.
ಕಳೆದ ಮೇ 1 ರಂದು ರಾತ್ರಿ 8:30ರ ಸುಮಾರಿಗೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ನಡು ರಸ್ತೆಯಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಏಳು ಮಂದಿ ಹಾಗೂ ಸುಫಾರಿ ಕೊಟ್ಟ ಓರ್ವ ಸೇರಿ ಒಟ್ಟು ಎಂಟು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚನೆ: ಸಚಿವ ಪರಮೇಶ್ವರ್ ಘೋಷಣೆ