ನವದೆಹಲಿ: ಚೀತಾ ಮರು ಪರಿಚಯ ಯೋಜನೆಯಡಿ ನಮೀಬಿಯಯಾದಿಂದ ಭಾರತಕ್ಕೆ 8 ಚೀತಾಗಳನ್ನು ತರಿಸಿಕೊಳ್ಳಲಾಗಿದೆ.
ಇವುಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ- 25ಕ್ಕೂ ಹೆಚ್ಚು ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಮುಸ್ಲಿಂ ಮುಖಂಡ
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘8 ಚೀತಾಗಳು ಬಂದವು. ಈಗ ಹೇಳಿ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಏಕೆ ಬಂದಿಲ್ಲ?’ ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ‘ರಾಷ್ಟ್ರೀಯ ಬೆರೋಜ್‌ಗರ್ ದಿವಾಸ್’ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಹೋಗಿಬರುತ್ತಿದ್ದ ಬಸ್ ಅಪಘಾತ – 20 ಮಹಿಳೆಯರಿಗೆ ಗಾಯ
ಕೇಂದ್ರ ಸರ್ಕಾರದ ಚೀತಾ ಯೋಜನೆಯು ರಾಷ್ಟ್ರೀಯ ಸಮಸ್ಯೆಗಳು ಮತ್ತು ಕಾಂಗ್ರೆಸ್ ನಡೆಸುತ್ತಿರುವ ‘ಭಾರತ್ ಜೋಡೊ ಯಾತ್ರೆ’ ಕಡೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಟೀಕಿಸಿದ್ದರು.
ಪ್ರಧಾನಿಯವರ ಜನ್ಮದಿನವನ್ನು ಯುವಜನರು ʻರಾಷ್ಟ್ರೀಯ ನಿರುದ್ಯೋಗ ದಿನʼವನ್ನಾಗಿ ಆಚರಿಸುತ್ತಿದ್ದಾರೆ. ವಾರ್ಷಿಕವಾಗಿ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ನರೇಂದ್ರ ಮೋದಿ 8 ವರ್ಷಗಳಾದರೂ ಕೇವಲ 7 ಲಕ್ಷ ಉದ್ಯೋಗ ಮಾತ್ರ ಸೃಷ್ಟಿ ಮಾಡಿದ್ದಾರೆ. 22 ಕೋಟಿ ಜನರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಉದ್ಯೋಗ ಸೃಷ್ಟಿಗೆ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದ್ದಾರೆ.