ಮೊಗಾಡಿಶು: ಮುಂಬೈನ ತಾಜ್ ಹೋಟೆಲ್ ಅನ್ನು ಉಗ್ರರು ವಶಕ್ಕೆ ಪಡೆದು ಹತ್ಯಾಕಾಂಡ ನಡೆಸಿದ್ದ ಮಾದರಿಯಲ್ಲೇ ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಗುಂಡಿನ ದಾಳಿ ಹಾಗೂ ಬಾಂಬ್ ಸ್ಫೋಟ ನಡೆದಿದೆ.
ಅಲ್‌ಖೈದಾ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಲ್-ಶಬಾಬ್ ಸಂಘಟನೆಯ ಉಗ್ರರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, 8 ಮಂದಿ ನಾಗಕರಿಕರು ಬಲಿಯಾಗಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: 21 ಯುದ್ಧವಿಮಾನ, 5 ರಕ್ಷಣಾ ಹಡಗುಗಳಿಂದ ತೈವಾನ್ ಸುತ್ತುವರಿದ ಚೀನಾ
Advertisement
Advertisement
ಅಲ್-ಶಬಾಬ್ ಭಯೋತ್ಪಾದಕ ಗುಂಪಿನ ಉಗ್ರರು ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ, ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದ ಹಲವಾರು ಸಾವು-ನೋವುಗಳು ವರದಿಯಾಗಿವೆ. ಹೋಟೆಲ್ ಒಳಗೆ ಸ್ಫೋಟದ ಸದ್ದು ಕೂಡ ಕೇಳಿಬಂದಿದೆ. ದಾಳಿಯಲ್ಲಿ 8 ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಥುರಾ ದೇವಾಲಯದಲ್ಲಿ ಜನದಟ್ಟಣೆ – ಉಸಿರುಗಟ್ಟಿ ಇಬ್ಬರ ಸಾವು
Advertisement
ಹಯಾತ್ ಹೋಟೆಲ್ ಮೇಲಿನ ದಾಳಿಯು ಭದ್ರತಾ ಪಡೆಗಳು ಮತ್ತು ಜಿಹಾದಿ ಗುಂಪಿನ ಬಂದೂಕುಧಾರಿಗಳ ನಡುವೆ ಭಾರೀ ಗುಂಡಿನ ಚಕಮಕಿ ಉಂಟುಮಾಡಿದೆ. ಉಗ್ರರು ಇನ್ನೂ ಕಟ್ಟಡದೊಳಗೆ ಅಡಗಿಕೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿ ಮೊಹಮ್ಮದ್ ಅಬ್ದಿಕದಿರ್ ಹಸನ್ ತಿಳಿಸಿದ್ದಾರೆ.
Advertisement
ಈ ವರ್ಷದ ಮೇನಲ್ಲಿ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ಅಧಿಕಾರ ವಹಿಸಿಕೊಂಡ ನಂತರ ಸೊಮಾಲಿಯಲ್ಲಿ ನಡೆದ ಮೊದಲ ದಾಳಿ ಇದಾಗಿದೆ.