ರಾಯಪುರ: ಮಾವೋವಾದಿಗಳು ಮಂಗಳವಾರ ಸಿಆರ್‌ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯಲ್ಲಿ ಎಂಟು ಯೋಧರು ಮೃತಪಟ್ಟು, ಆರು ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಪ್ರದೇಶದಲ್ಲಿ ನಡೆದಿದೆ.
ಕಳೆದ ಕೆಲ ತಿಂಗಳಿಂದ ಸಿಆರ್‌ಪಿಎಫ್ ಯೋಧರು ನಡೆಯುತ್ತಿರುವ ನಕ್ಸಲ್ ವಿರುದ್ಧ ಕಾರ್ಯಾಚರಣೆಯನ್ನು ಗುರಿಯಾಗಿಸಿಕೊಂಡು ಸುಧಾರಿತ ತಂತ್ರಜ್ಞಾನದ ಸ್ಫೋಟಕ ಬಳಿಸಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ 8 ರಿಂದ 10 ಯೋಧರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇದೆ. ಘಟನೆ ನಡೆದ ತಕ್ಷಣ ಹೆಚ್ಚಿನ ಪೊಲೀಸ್ ದಳವನ್ನು ಸ್ಥಳಕ್ಕೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿರುವುದಾಗಿ ನಕ್ಸಲ್ ನಿಗ್ರಹ ದಳದ ಮಹಾನಿರ್ದೇಶಕ ಡಿಎಂ ಅವಸ್ಥಿ ತಿಳಿಸಿದ್ದಾರೆ.
Advertisement
Advertisement
ನಕ್ಸಲರು ಅಧಿಕ ಪ್ರಮಾಣದ ಸ್ಫೋಟಕವನ್ನು ಬಳಕೆ ಮಾಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಆರು ಯೋಧರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
Advertisement
ದಾಳಿ ಕುರಿತು ಪ್ಯಾರಾಮಿಲಿಟರಿ ಅಧಿಕಾರಿಗೊಬ್ಬರು ಮಾಹಿತಿ ನೀಡಿ, ರಾಯ್‍ಪುರದಿಂದ 500 ಕಿಮೀ ದೂರದ ಸಿಆರ್‌ಪಿಎಫ್ ನ 212 ಬೆಟಲಿಯನ್ ಮುಖ್ಯ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಸುಕ್ಮಾ ಪ್ರದೇಶದ ಕಿಸ್ತಾರಮ್ ಅರಣ್ಯ ವಲಯದ ನಕ್ಸಲ್ ಪ್ರಾಬಲ್ಯದ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಮಗಾರಿ ಸುರಕ್ಷತೆ ದೃಷ್ಟಿಯಿಂದ ಯೋಧರನ್ನು ನೇಮಕ ಮಾಡಲಾಗಿತ್ತು. ಈ ವೇಳೆ ನಕ್ಸಲ್ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿತ್ತು ಎಂದು ಮಾಹಿತಿ ನೀಡಿದ್ದಾರೆ.
Advertisement
ಕಳೆದ 11 ದಿನಗಳ ಹಿಂದೆ ಯೋಧರು ನಕ್ಸಲರು ವಿರುದ್ಧ ಕಾರ್ಯಾಚರಣೆ ನಡೆಸಿ 11 ಮಂದಿಯನ್ನು ಹತ್ಯೆ ಮಾಡಿದ್ದರು. ಇದಾದ ಬಳಿಕ ಯೋಧರ ಮೇಲೆ ದಾಳಿ ನಡೆಸಲಾಗಿದೆ.
ಕಳೆದ ಆರು ತಿಂಗಳಿನಿಂದ ಛತ್ತೀಸ್‍ಗಢದಲ್ಲಿ ಸುಮಾರು 25 ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದಾರೆ. ಅದರೂ ಯೋಧರು ನಕ್ಸಲರ್ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಯಶ್ವಸಿಯಾಗಿದ್ದು, ಸುಮಾರು 300 ಕ್ಕೂ ಹೆಚ್ಚು ನಕ್ಸಲರನ್ನು ಎನ್‍ಕೌಂಟರ್ ಮಾಡಲಾಗಿದೆ ಎಂದು ಗೃಹ ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಮಾವೋವಾದಿಗಳ ಹಿಡಿತದಲ್ಲಿರುವ ಛತ್ತೀಸ್‍ಗಢದ ಅಬುಜ್ಮಾದ್ ಅರಣ್ಯ ಪ್ರದೇಶದಲ್ಲಿ ಸಿಆರ್ ಪಿಎಫ್ ಪಡೆ ಮೂರು ಶಾಶ್ವತ ಕ್ಯಾಂಪ್ ಗಳನ್ನು ಈ ತಿಂಗಳ ಹಿಂದೆ ತೆರೆದಿದು, ಪ್ರತಿ ಕ್ಯಾಂಪ್ ನಲ್ಲಿ ಕನಿಷ್ಟ ನೂರು ಮಂದಿ ಸಿಬ್ಬಂದಿಗಳಿರುತ್ತಾರೆ ಎಂದು ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು.
#SpotVisuals from the site of IED blast by Naxals in Kistaram area of #Chhattisgarh's Sukma, 9 CRPF personnel have lost their lives. pic.twitter.com/TNBUJh5en6
— ANI (@ANI) March 13, 2018