ಜೈಪುರ್: ರಾಜಸ್ಥಾನದ (Rajasthan) ಸಾರಿಗೆ ಬಸ್ (Bus) ಜೈಪುರದ (Jaipur) ದುಡು ಜಿಲ್ಲೆಯಲ್ಲಿ ಟೈರ್ ಸ್ಫೋಟಗೊಂಡು ವ್ಯಾನ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ 8 ಜನ ಸಾವನ್ನಪ್ಪಿದ್ದಾರೆ.
ಮೋಖಂಪುರ ಗ್ರಾಮದ ಬಳಿಯ ಎನ್‌ಎಚ್ -48ರಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಕನಿಷ್ಠ ಆರು ಜನ ಗಾಯಗೊಂಡಿದ್ದಾರೆ.
Advertisement
ಜೈಪುರದಿಂದ ಅಜ್ಮೀರ್‌ಗೆ ಪ್ರಯಾಣಿಸುತ್ತಿದ್ದ ಬಸ್ ಟೈರ್ ಸ್ಫೋಟಗೊಂಡ ನಂತರ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಜಿಲ್ಲೆಯ ಉಪ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಖಂಡೇಲ್ವಾಲ್ ತಿಳಿಸಿದ್ದಾರೆ.
Advertisement
Advertisement
ಸಾವನ್ನಪ್ಪಿದ ಪ್ರಯಾಣಿಕರು ರಾಜಸ್ಥಾನದ ಭಿಲ್ವಾರ ನಿವಾಸಿಗಳು ಎಂದು ತಿಳಿದುಬಂದಿದೆ.
Advertisement
ಅಪಘಾತದಲ್ಲಿ ಜಖಂಗೊಂಡ ವಾಹನಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.