ಉತ್ತರಾಖಂಡದಲ್ಲಿ ಕಮರಿಗೆ ಉರುಳಿ ಬಿದ್ದ ಟೆಂಪೋ – 14 ಮಂದಿ ದುರ್ಮರಣ

Public TV
1 Min Read
8 dead many injured as tempo falls into gorge in Uttarakhand

ಡೆಹ್ರಾಡೂನ್: ಉತ್ತರಾಖಂಡದ (Uttarakhand) ರುದ್ರಪ್ರಯಾಗದ ಋಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ (Rishikesh-Badrinath highway) ಟೆಂಪೋ ಟ್ರಾವೆಲರ್ ಒಂದು 200 ಮೀಟರ್ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಟೆಂಪೋ 23ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಚೋಪ್ಟಾ ಪ್ರದೇಶದ ಕಡೆಗೆ ಸಾಗುತ್ತಿತ್ತು. ಈ ವೇಳೆ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತ ಬೆಳಿಗ್ಗೆ 11:30ರ ಸುಮಾರಿಗೆ ಸಂಭವಿಸಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‍ಡಿಆರ್‍ಎಫ್) ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.

ಎಸ್‍ಡಿಆರ್‍ಎಫ್ (SDRF) ಮತ್ತು ಪೊಲೀಸ್ ಸಿಬ್ಬಂದಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿ ಪವಿತ್ರಾಗೌಡ ಧಿಮಾಕು!

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ಇದೊಂದು ತೀವ್ರ ದುಃಖಕರ ಸಂಗತಿಯಾಗಿದೆ. ಸ್ಥಳೀಯ ಆಡಳಿತ ಮತ್ತು ಎಸ್‍ಡಿಆರ್‍ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಪಘಾತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ಯಾರ ಮೇಲೆ ದೂರೋದಿಲ್ಲ, ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತೆ: ಬಿಎಸ್‌ವೈ

Share This Article