ನವದೆಹಲಿ: ಭಾರತೀಯ ನೌಕಾಪಡೆಯ (Indian Navy) 8 ಮಾಜಿ ಅಧಿಕಾರಿಗಳು ಕತಾರ್‌ನಲ್ಲಿ (Qatar) ಬಂಧನದಲ್ಲಿದ್ದಾರೆ. ಅವರ ಯೋಗಕ್ಷೇಮವನ್ನು ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi), ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಂಧನದಲ್ಲಿರುವ 8 ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಯೋಗಕ್ಷೇಮವನ್ನು ವಿಚಾರಿಸಿದೆ. ಅವರನ್ನು ಅಲ್ಲಿಂದ ಬಿಡುಗಡೆಗೊಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ದಾಳಿ – ಪಿಎಂ ಸೇರಿ ಮೂವರ ಮೇಲೆ ಇಮ್ರಾನ್ ಖಾನ್‌ಗೆ ಅನುಮಾನ
Advertisement
Advertisement
ವರದಿಗಳ ಪ್ರಕಾರ ಕತಾರ್ ಎಮಿರಿ ನೌಕಾಪಡೆಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುವ ಕಂಪನಿಯೊಂದಿಗೆ ಅಲ್ಲಿ ಕೆಲಸ ಮಾಡುತ್ತಿರುವ 8 ಮಾಜಿ ಭಾರತೀಯ ನೌಕಾಪಡೆ ಅಧಿಕಾರಿಗಳು ಬಂಧನವಾಗಿದ್ದಾರೆ. ಈ ಬಂಧನವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ದೃಢಪಡಿಸಿದೆ. ಆದರೆ ಅವರ ವಿರುದ್ಧ ಯಾವ ಆರೋಪಗಳಿವೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಕೊಚ್ಚಿ, ತುಂಡು ಮಾಡಿ ನಾಯಿಗೆ ಬಿಸಾಕ್ತೀವಿ- ಮುತಾಲಿಕ್‌ಗೆ ಜೀವ ಬೆದರಿಕೆ
Advertisement
ಬಳಿಕ ಮಾತನಾಡಿದ ಬಾಗ್ಚಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ರಷ್ಯಾ ಭೇಟಿ ಬಗ್ಗೆ ತಿಳಿಸಿದರು. ಜೈಶಂಕರ್ ಅವರು ನವೆಂಬರ್ 7-8 ರಂದು ರಷ್ಯಾಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ರಷ್ಯಾದ ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೋ ಅವರನ್ನು ಭೇಟಿಯಾಗಲಿದ್ದಾರೆ. ದ್ವಿಪಕ್ಷೀಯ ವಿಷಯಗಳ ಕುರಿತು ಹಾಗೂ ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು.