ಇಸ್ಲಾಮಾಬಾದ್: ಅರಬ್ಬಿ ಸಮುದ್ರದಲ್ಲಿ ಎರಡು ಮೀನುಗಾರಿಕಾ ಬೋಟ್‍ಗಳು ಮಗುಚಿ, 8 ಮಂದಿ ನಾಪತ್ತೆಯಾಗಿದ್ದಾರೆ.
ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಗಳು ದೇಶದ ದಕ್ಷಿಣ ಸಿಂಧ್ ಪ್ರಾಂತ್ಯದ ಥಟ್ಟಾ ಕರಾವಳಿ ಪ್ರದೇಶದ ಅರಬ್ಬಿ ಸಮುದ್ರದಲ್ಲಿ ಮುಳುಗಿವೆ. 8 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಿಜೆಪಿಗೆ ಮತ್ತೊಂದು ಶಾಕ್ – ಗೋವಾ ಮಾಜಿ ಸಿಎಂ ಪರ್ಸೇಕರ್ ರಾಜೀನಾಮೆ
Advertisement
ಇಬ್ರಾಹಿಂ ಹೈದರಿ ಪ್ರದೇಶದಿಂದ ಹೊರಟಿದ್ದ ಅಲ್-ಸಿದ್ದಿಕ್ ಮತ್ತು ಅಲ್-ಬಹ್ರಿಯಾ ಹೆಸರಿನ ಎರಡು ಮೀನುಗಾರಿಕಾ ದೋಣಿಗಳು ಮಗುಚಿವೆ. ರಕ್ಷಣಾ ಪಡೆಗಳು ಸುಮಾರು 25 ಮೀನುಗಾರರನ್ನು ರಕ್ಷಿಸಿದ್ದು, ಎಂಟು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!
Advertisement
Advertisement
ಥಟ್ಟಾ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿನ ಅತಿಯಾದ ಗಾಳಿಯೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ದ್ವಂದ್ವ – ನೈಟ್ ಕರ್ಫ್ಯೂ ಬಗ್ಗೆ ಡಿಕೆಶಿ, ಸಿದ್ದು ಭಿನ್ನ ಅಭಿಪ್ರಾಯ