ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಚಂಬಾ ಜಿಲ್ಲೆಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ (Bus Accident) ಚಾಲಕ, ಕಂಡಕ್ಟರ್ ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಮಂದಿ ಗಾಯಗೊಂಡಿದ್ದು, ಅದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ.
ಇಂದು (ಆ.8) ಬೆಳಿಗ್ಗೆ ಬಸ್ ಬೈರಾಗರ್‌ನಿಂದ ಚಂಬಾಗೆ ತೆರಳುತ್ತಿತ್ತು. ಬೈರಾಗರ್- ಟಿಸ್ಸಾ ಮಾರ್ಗದ ದೇವಿಕೋಥಿ ಪ್ರದೇಶದ ಚಲುಂಜ್ ಮೋರ್ ಬಳಿ ಬಸ್ ಪಲ್ಟಿಯಾಗಿದೆ. ಅಪಘಾತದ ಸಮಯದಲ್ಲಿ 18 ಜನ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ವಾಹನ ಪಲ್ಟಿಯಾಗಿ ಕೆಳಗಿನ ರಸ್ತೆಗೆ ಬಿದ್ದಿದೆ, ಈ ವೇಳೆ ಕೆಲವು ಪ್ರಯಾಣಿಕರು ಬಸ್‌ನ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ
ಗಾಯಾಳುಗಳ ಚೀರಾಟ ಕೇಳಿ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಎನ್‌ಡಿಆರ್‌ಎಫ್, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಸ್‌ನ್ನು ಮೇಲೆತ್ತಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
चंबा जिला के तीसा-बैरागढ़ मार्ग पर चालुज मोड़ के पास हुए बस हादसे में 7 लोगों के निधन तथा अन्य 11 के घायल होने का समाचार अत्यंत दुखद है।
इस दुःखद हादसे में अपनों को खोने वाले परिवारों के प्रति मेरी गहरी संवेदनाएँ हैं। ईश्वर दिवंगत जनों की आत्मा को अपने श्रीचरणों में स्थान दें और… pic.twitter.com/XUdZ945Rx5
— Sukhvinder Singh Sukhu (@SukhuSukhvinder) August 8, 2026
ಅಪಘಾತದಲ್ಲಿ ಮೃತಪಟ್ಟವರ ಗುರುತನ್ನು ಅಧಿಕಾರಿಗಳು ಇನ್ನೂ ಬಿಟ್ಟಿಲ್ಲ. ಅಪಘಾತಕ್ಕೆ ಕಾರಣವೇನು ಎಂದು ಪತ್ತೆ ಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಘಟನೆಯ ನಂತರ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇದರ ನಡುವೆಯೇ ಧಾರಾಕಾರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ 185 ರಸ್ತೆಗಳು ಬಂದ್ ಆಗಿವೆ. ಶಿಮ್ಲಾ ಹವಾಮಾನ ಇಲಾಖೆ ಕಚೇರಿ ಶನಿವಾರ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಆ.10 ಮತ್ತು 11 ರಂದು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿವೆ. ಇದನ್ನೂ ಓದಿ: ಉದ್ಯೋಗದ ಆಸೆ ತೋರಿಸಿ ಭಾರತೀಯ ಮಹಿಳೆ ಕಿಡ್ನ್ಯಾಪ್; 11 ಲಕ್ಷ ಹಣಕ್ಕೆ ಬಿಯರ್ ಅಂಗಡಿ ಮಾಲೀಕನಿಗೆ ಸೇಲ್



