ಲಕ್ನೋ: ಮದುವೆ ಮುಗಿಸಿ ತಡರಾತ್ರಿ ಮನೆಗೆ ತೆರೆಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿ, 12 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಲೆಹ್ರವಾನ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ತಡರಾತ್ರಿ ಮದುವೆಗೆ ಹೋದವರು ಬರುತ್ತಿದ್ದ ವಾಹನ ಹಾಗೂ ಮಿನಿ- ಗೂಡ್ಸ್ ಕಾರಿಯರ್ ನಡುವೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ 8 ಮಂದಿ ಅಸುನೀಗಿದ್ದಾರೆ. ಹಾಗೆಯೇ 12 ಮಂದಿ ಇನ್ನೂ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ಸಂಭಾಲದ ಎಸ್‍ಪಿ ಯಮುನಾ ಪ್ರಸಾದ್ ತಿಳಿಸಿದ್ದಾರೆ.
Advertisement
Advertisement
ನಾವು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಡರಾತ್ರಿ ಊರಿಗೆ ಮರಳುತ್ತಿದ್ದೇವು. ಈ ವೇಳೆ ಈ ದುರ್ಘಟನೆ ನಡೆದಿದೆ ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ಕಣ್ಣಿರಿಟ್ಟಿದ್ದಾರೆ.
Advertisement
Sambhal: 8 people died, 12 injured when their vehicle collided with another vehicle in Lahraban village last night. pic.twitter.com/9sr5PFIQYr
— ANI UP/Uttarakhand (@ANINewsUP) June 19, 2019
Advertisement
ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಅಪಘಾತ ಬಗ್ಗೆ ತಿಳಿದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]