ಭುವನೇಶ್ವರ: ದೀಪಾವಳಿ ಹಬ್ಬದಂದೇ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು ಸುಮಾರು 8 ಜನರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಸ್ಫೋಟದಿಂದ ಕಾರ್ಖಾನೆಯ ಅವಶೇಷಗಳ ಕೆಳಗೆ ಇನ್ನೂ ಕಾರ್ಮಿಕರು ಸಿಲುಕಿಕೊಂಡಿರುವ ಸಾಧ್ಯತೆಗಳಿದೆ. ಆದರೆ ಅವರನ್ನು ರಕ್ಷಣೆ ಮಾಡುವ ಕಾರ್ಯಕ್ಕೆ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅಡ್ಡಿ ಆಗಿತ್ತು. ಇತ್ತೀಚಿನ ವರದಿಯ ಪ್ರಕಾರ ಘಟನೆಯಲ್ಲಿ 8 ಜನ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Advertisement
Advertisement
ಬಾಲಸೋರ್‍ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಬಹಾಬಲ್ಪುರ್‍ನಲ್ಲಿ ಈ ಫ್ಯಾಕ್ಟರಿ ಇದೆ. ಬುಧವಾರ ಸಂಜೆ ಸುಮಾರು 4.00 ಗೆ ಈ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿಯೇ 6 ಜನರು ಮೃತಪಟ್ಟಿದ್ದರು. ಸತ್ತವರ ದೇಹಗಳನ್ನು ಪತ್ತೆ ಮಾಡಲಾಗಿದೆ. ಈ ಫ್ಯಾಕ್ಟರಿ ಯಾವುದೇ ರೀತಿ ಅಧಿಕೃತ ಲೈಸೆನ್ಸ್ ಹೊಂದದೆ ಅಕ್ರಮವಾಗಿ ಪಟಾಕಿ ತಯಾರಿಸುತ್ತಿತ್ತು ಎಂದು ಜಿಲ್ಲಾಧಿಕಾರಿ ಪ್ರಮೋದ್ ಕುಮಾರ್ ದಾಸ್ ತಿಳಿಸಿದ್ದಾರೆ.
Advertisement
ಈ ಅವಘಡದಿಂದ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಬಾಲಸೋರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಸ್ಫೋಟದ ಪರಿಣಾಮ ಪಟಾಕಿ ಫ್ಯಾಕ್ಟರಿ ನಡೆಸುತ್ತಿದ್ದ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಅಷ್ಟೇ ಅಲ್ಲದೇ ದೇಹಗಳು ಚಿದ್ರಚಿದ್ರವಾಗಿ ಗುರುತಿಸುವುದಕ್ಕೂ ಕಷ್ಟವಾಗಿತ್ತು. ಫ್ಯಾಕ್ಟರಿ ಮಾಲೀಕ ಪಟಾಕಿಗಳನ್ನು ಹೊರಗಡೆಯೂ ಮಾರಾಟ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ದಾಸ್, ಎಸ್‍ಪಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಚರಣೆಯನ್ನು ನಡೆಸಿದ್ದಾರೆ. ಘಟನೆಗೆ ನಿಖರವಾದ ಕಾರಣ ಏನೆಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.