ಚಂಡೀಗಢ: 50 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಸೇತುವೆಯ ಮೇಲಿಂದ ಚರಂಡಿಗೆ ಬಿದ್ದ ಪರಿಣಾಮ 8 ಜನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ (Punjab) ಬತಿಂಡಾದಲ್ಲಿ (Bathinda) ನಡೆದಿದೆ.
ಇಂದು (ಡಿ.27) ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ 8 ಜನ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.ಇದನ್ನೂ ಓದಿ: ರಣಬೀರ್ ಕಪೂರ್-ದೀಪಿಕಾ ಪಡುಕೋಣೆಯ ‘ಯೇ ಜವಾನಿ ಹೈ ದೀವಾನಿ’ ಜ.3ಕ್ಕೆ ರೀ-ರಿಲೀಸ್
ಬಸ್ ಪಂಜಾಬ್‌ನ ಸರ್ದುಲ್‌ಗಢದಿಂದ ಬತಿಂಡಾಗೆ ತೆರಳುತ್ತಿತ್ತು. ಈ ವೇಳೆ ಜಿವಾನ್ ಸಿಂಗ್ ವಾಲಾ ಗ್ರಾಮದಲ್ಲಿ ಸೇತುವೆ ಮೇಲಿಂದ ಚರಂಡಿಗೆ ಬಿದ್ದಿದೆ. ಕೂಡಲೇ ಅಲ್ಲಿಯೇ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೊಂದು ಭೀಕರ ದುರಂತ. ಗಾಯಗೊಂಡು ಸಿವಿಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ 18 ಮಂದಿ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಜೊತೆಗೆ ಎಲ್ಲಾ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಎಎಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಪ್ರದೇಶದಲ್ಲಿ ಹವಾಮಾನ ವೈಪರೀತ್ಯವಿರುವ ಕಾರಣದಿಂದಾಗಿ ಈ ಅಪಘಾತ ಸಂಭವಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ರೇಪ್ ಕೇಸ್ ಕೊಟ್ಟವರು ಪರಿಚಯವೇ ಇಲ್ಲ ಅಂತ ದೇವರ ಮೇಲೆ ಪ್ರಮಾಣ ಮಾಡಲಿ: ಮುನಿರತ್ನ